ದೆಹಲಿಯ ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಉತ್ತರ ಭಾರತದಲ್ಲಿ ಲೋಹ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ ಹಿಂದಿನ ದಿನ ಇದನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಲೋಹ್ರಿಯನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನರೈನಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಲೋಹ್ರಿಯ ಪವಿತ್ರ ಬೆಂಕಿಯನ್ನು ಬೆಳಗಿಸಿ, ಅಲ್ಲಿ ವಾಸಿಸುವ ಜನರೊಂದಿಗೆ ಸಂವಾದ ನಡೆಸಿದ್ದಾರೆ. ಮಕರ ಸಂಕ್ರಾಂತಿಯ ಮುನ್ನಾದಿನದಂದು ಕುಟುಂಬದವರು ಮತ್ತು ನೆರೆಹೊರೆಯ ಜನರು ರಾತ್ರಿಯಲ್ಲಿ ತೆರೆದ ಸ್ಥಳದಲ್ಲಿ ಬೆಂಕಿಯ ಸುತ್ತಲೂ ವೃತ್ತಾಕಾರದಲ್ಲಿ ಕುಳಿತು ರೇವ್ಡಿ, ಕಡಲೆಕಾಯಿ ಮತ್ತು ಲಾವಾ ಇತ್ಯಾದಿಗಳನ್ನು ತಿನ್ನುವ ಮೂಲಕ ಲೋಹ್ರಿ ಹಬ್ಬವನ್ನು ಆಚರಿಸುತ್ತಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ನರೈನಾ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಬಳಿಕ, ಅಲ್ಲಿನ ಜನರೊಂದಿಗೆ ಲೋಹ್ರಿ ಆಚರಿಸಿ, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಇದಕ್ಕೂ ಮುನ್ನ ಮೋದಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರ ನಿವಾಸದಲ್ಲಿ ನಡೆದ ಸಂಕ್ರಾಂತಿ-ಪೊಂಗಲ್ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಮಕರ ಸಂಕ್ರಾಂತಿಯ ಹಿಂದಿನ ದಿನ ಲೋಹ್ರಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ ಮುನ್ನಾ ದಿನದಂದು ಕುಟುಂಬಸ್ಥರು ಮತ್ತು ನೆರೆಹೊರೆಯ ಜನರು ಒಟ್ಟಿಗೇ ಸೇರಿ, ಬೆಂಕಿಯ ಸುತ್ತಲೂ ವೃತ್ತಾಕಾರದಲ್ಲಿ ಕುಳಿತು ರೇವ್ಡಿ, ಕಡಲೆಕಾಯಿ ಮತ್ತು ಲಾವಾ ಇತ್ಯಾದಿಗಳನ್ನು ತಿನ್ನುವ ಮೂಲಕ ಹಬ್ಬವನ್ನು ಆಚರಿಸುತ್ತಾರೆ. ಪಂಜಾಬ್, ಜಮ್ಮು, ಹಿಮಾಚಲ ಪ್ರದೇಶ, ದೆಹಲಿ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಲೋಹ್ರಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇಂದು ಸಂಜೆ, ದೆಹಲಿಯ ನರೈನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಹ್ರಿಯನ್ನು ಆಚರಿಸಲು ನನಗೆ ಅವಕಾಶ ಸಿಕ್ಕಿತು. ವಿಶೇಷವಾಗಿ ಯುವಕರು ಮತ್ತು ಮಹಿಳೆಯರು ಈ ಆಚರಣೆಯಲ್ಲಿ ಭಾಗವಹಿಸಿದ್ದರು. ಎಲ್ಲರಿಗೂ ಲೋಹ್ರಿಯ ಶುಭಾಶಯಗಳು! ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ