ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಂಗಳೂರು ಸಜ್ಜು; ಎಲ್ಲೆಡೆ ಕಂಗೊಳಿಸುತ್ತಿದೆ ಬಿಜೆಪಿ ಬಾವುಟ
ಬೆಂಗಳೂರಿನ ರೈಲು ನಿಲ್ದಾಣದ ಹೊರಗೆ ಬಿಜೆಪಿ ಬಾವುಟಗಳನ್ನು ಹಾಕಲಾಗಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಶಾಂತಲ ಜಂಕ್ಷನ್‌ವರೆಗೂ ಬಾವುಟದ ಭರಾಟೆ ಜೋರಾಗಿದೆ.
ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಬಹು ನಿರೀಕ್ಷಿತ ವಂದೇ ಭಾರತ್ ಎಕ್ಸ್ಪ್ರೆಸ್ (Vande Bharat Express) ಅನ್ನು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಎಲ್ಲ ರೀತಿಯ ಸಿದ್ಧತೆಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತಲೂ ರಸ್ತೆಗಳ ಅಕ್ಕಪಕ್ಕದಲ್ಲಿ ಬಿಜೆಪಿಯ ಬಾವುಟಗಳು ರಾರಾಜಿಸುತ್ತಿವೆ. ಬೆಂಗಳೂರಿನ ರೈಲು ನಿಲ್ದಾಣದ (Bengaluru Railway Station) ಹೊರಗೆ ಬಿಜೆಪಿ ಬಾವುಟಗಳನ್ನು ಹಾಕಲಾಗಿದ್ದು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಶಾಂತಲ ಜಂಕ್ಷನ್‌ವರೆಗೂ ಬಾವುಟದ ಭರಾಟೆ ಜೋರಾಗಿದೆ. ಈ ಕುರಿತು ಟಿವಿ9 ಪ್ರತಿನಿಧಿ ರಾಮ್ ಪ್ರತ್ಯಕ್ಷ ವರದಿ ನೀಡಿದ್ದಾರೆ.
Published on: Nov 11, 2022 08:45 AM