ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಕಾನ್ಪುರದಲ್ಲಿ ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಎಚ್ಚರಿಕೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ ಆಳವಾಗಿ ಭಯೋತ್ಪಾದಕ ನೆಲೆಗಳನ್ನು ಹೊಡೆದುರುಳಿಸಿದ ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ ಎಂದು ಪುನರುಚ್ಚರಿಸಿದರು. ಪಾಕಿಸ್ತಾನವು ಯುದ್ಧವನ್ನು ನಿಲ್ಲಿಸುವಂತೆ ಮನವಿ ಮಾಡಿದೆ. ಆದರೂ ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ ಎಂದರು.
ಕಾನ್ಪುರ, ಮೇ 30: ಬಿಹಾರದ ಕಾನ್ಪುರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಶತ್ರುಗಳು ಎಲ್ಲೇ ಇದ್ದರೂ ಶತ್ರುವನ್ನು ಸೋಲಿಸಲಾಗುವುದು. ಆಪರೇಷನ್ ಸಿಂಧೂರ್ (Operation Sindoor) ಇನ್ನೂ ಮುಗಿದಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಅನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಭಾರತೀಯ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದರು. ನಾವು ಭಯೋತ್ಪಾದಕರ ಶಿಬಿರಗಳಿಗೆ ನುಗ್ಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ತಾಣಗಳನ್ನು ನಾಶಪಡಿಸಿದ್ದೇವೆ. ನಮ್ಮ ಸಶಸ್ತ್ರ ಪಡೆಗಳು ಎಷ್ಟು ಧೈರ್ಯವನ್ನು ತೋರಿಸಿದವು ಎಂದರೆ ಪಾಕಿಸ್ತಾನ ಸೇನೆಯು ಯುದ್ಧವನ್ನು ನಿಲ್ಲಿಸುವಂತೆ ಬೇಡಿಕೊಂಡಿತು. ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮನ್ನು ನಿಲ್ಲಿಸುವಂತೆ ಬೇಡಿಕೊಂಡ ಶತ್ರುಗಳಿಗೆ ನಾನು ಒಂದು ಮಾತು ಹೇಳಬಯಸುತ್ತೇನೆ. ನೀವು ಮೋಸ ಹೋಗಬೇಡಿ, ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ ಎಂದು ಪಾಕಿಸ್ತಾನಕ್ಕೆ ಮೋದಿ ಎಚ್ಚರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ