AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Narendra Modi Karnataka Visit: ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಒಂದು ಸುತ್ತು ಹಾಕಿದ ಪ್ರಧಾನಿ

PM Narendra Modi Karnataka Visit: ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಒಂದು ಸುತ್ತು ಹಾಕಿದ ಪ್ರಧಾನಿ

ಅರುಣ್​ ಕುಮಾರ್​ ಬೆಳ್ಳಿ
|

Updated on:Feb 06, 2023 | 2:25 PM

Share

ಪ್ರಧಾನಿಗಳು ಯಾವುದೋ ವಿಷಯಕ್ಕೆ ರಾಜ್ಯಪಾಲರು ಮತ್ತು ಅಧಿಕಾರಿಗಳೊಂದಿಗೆ ಜೋಕ್ ಮಾಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದಾಗಿದೆ.

ಬೆಂಗಳೂರು: ಮಾದವಾರದಲ್ಲಿರುವ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ (BIEC) ಭಾರತ ಇಂಧನ ಸಪ್ತಾಹ 2023 ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಕೇಂದ್ರದಲ್ಲಿ ಒಂದು ಸುತ್ತುಹಾಕಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಇತರ ಗಣ್ಯರು ಇದ್ದರು. ಬಿಇಐಸಿ ಅಧಿಕಾರಿಗಳು ಅಲ್ಲಿರುವ ವಸ್ತುಗಳ ವಿಶೇಷತೆ ಬಗ್ಗೆ ವಿವರಣೆ ನೀಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪ್ರಧಾನಿಗಳು ಯಾವುದೋ ವಿಷಯಕ್ಕೆ ರಾಜ್ಯಪಾಲರು ಮತ್ತು ಅಧಿಕಾರಿಗಳೊಂದಿಗೆ ಜೋಕ್ ಮಾಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 06, 2023 02:22 PM