ಬಿಜೆಪಿ ಕಾರ್ಯಕರ್ತರತ್ತ ಸ್ಕಾರ್ಫ್ ಬೀಸುತ್ತಾ ವಿಜಯದ ನಗು ಬೀರಿದ ಪ್ರಧಾನಿ ಮೋದಿ
ಬಿಹಾರ ಚುನಾವಣೆ 2025ರಲ್ಲಿ NDAಯ ಐತಿಹಾಸಿಕ ಗೆಲುವಿನ ನಂತರ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು, ಸಂಭ್ರಮಾಚರಣೆಯಲ್ಲಿ ಶಾಲನ್ನು ಬೀಸುತ್ತಾ ಸಂತಸ ವ್ಯಕ್ತಪಡಿಸಿದರು. ಈ ವೇಳೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸನ್ಮಾನ ಮಾಡಲಾಯಿತು.
ನವದೆಹಲಿ, ನವೆಂಬರ್ 14: ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಧಾನಿ ಮೋದಿ (PM Narendra Modi) ಇಂದು ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ಮೋದಿ ಆಗಮಿಸುತ್ತಿದ್ದಂತೆ ಇಡೀ ಕಚೇರಿಯೇ ಮೋದಿ ಮೋದಿ ಎಂದು ಮೋದಿ ಮಂತ್ರದೊಂದಿಗೆ ಮಾರ್ದನಿಸಿತು. ಕಾರ್ಯಕರ್ತರತ್ತ ಪ್ರಧಾನಿ ನರೇಂದ್ರ ಮೋದಿ ಸ್ಕಾರ್ಫ್ ಬೀಸುತ್ತಾ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಇದು ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ಸಂಕೇತವಾಗಿತ್ತು.
ಈ ವೇಳೆ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸನ್ಮಾನ ಮಾಡಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

