AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ; ತಮಿಳಿನ ತಿರುಕ್ಕುರಳ್ ಕೃತಿಯ ರಷ್ಯನ್ ಅನುವಾದ ಉಡುಗೊರೆ

ಪುಟಿನ್​ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ; ತಮಿಳಿನ ತಿರುಕ್ಕುರಳ್ ಕೃತಿಯ ರಷ್ಯನ್ ಅನುವಾದ ಉಡುಗೊರೆ

ಸುಷ್ಮಾ ಚಕ್ರೆ
|

Updated on: Sep 11, 2026 | 4:56 PM

Share

ದೆಹಲಿಯಲ್ಲಿ ನಡೆದ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ತಮಿಳು ದಾರ್ಶನಿಕ ಸಂತ ತಿರುವಳ್ಳುವರ್ ಅವರ ವಿಶ್ವಪ್ರಸಿದ್ಧ ಕೃತಿ 'ತಿರುಕ್ಕುರಳ್'ನ ರಷ್ಯನ್ ಅನುವಾದದ ಪ್ರತಿಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಹಸ್ತಾಂತರಿಸಿದರು. ಮಾನವೀಯ ಮೌಲ್ಯಗಳು, ರಾಜನೀತಿ ಮತ್ತು ಸತ್ಯವನ್ನು ಸಾರುವ ಭಾರತದ ಪ್ರಾಚೀನ ತಮಿಳು ಸಾಹಿತ್ಯದ ಶ್ರೇಷ್ಠ ಕೊಡುಗೆಯಾದ 'ತಿರುಕ್ಕುರಳ್' ಅನ್ನು ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಪ್ರಧಾನಿ ಮೋದಿ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಿದರು. ಈ ನಡೆಗೆ ತಮಿಳುನಾಡು ಸೇರಿದಂತೆ ಇಡೀ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ನವದೆಹಲಿ, ಸೆಪ್ಟೆಂಬರ್ 11: ದೆಹಲಿಯ ‘ಭಾರತ ಮಂಟಪ’ದಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಅಪ್ಪಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು. ಈ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಉನ್ನತ ಮಟ್ಟದ ದ್ವಿಪಕ್ಷೀಯ ಸಭೆ ನಡೆಯಿತು. ಜಾಗತಿಕ ರಾಜಕೀಯ ಮತ್ತು ಆರ್ಥಿಕ ವಿದ್ಯಮಾನಗಳ ನಡುವೆ ನಡೆದ ಈ ಭೇಟಿಯು ಉಭಯ ದೇಶಗಳ ನಡುವಿನ ಸುದೀರ್ಘ ತಾಂತ್ರಿಕ ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ವೃದ್ಧಿಸಿದೆ.

ದೆಹಲಿಯಲ್ಲಿ ನಡೆದ ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ತಮಿಳು ದಾರ್ಶನಿಕ ಸಂತ ತಿರುವಳ್ಳುವರ್ ಅವರ ವಿಶ್ವಪ್ರಸಿದ್ಧ ಕೃತಿ ‘ತಿರುಕ್ಕುರಳ್’ನ ರಷ್ಯನ್ ಅನುವಾದದ ಪ್ರತಿಯನ್ನು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಹಸ್ತಾಂತರಿಸಿದರು. ಮಾನವೀಯ ಮೌಲ್ಯಗಳು, ರಾಜನೀತಿ ಮತ್ತು ಸತ್ಯವನ್ನು ಸಾರುವ ಭಾರತದ ಪ್ರಾಚೀನ ತಮಿಳು ಸಾಹಿತ್ಯದ ಶ್ರೇಷ್ಠ ಕೊಡುಗೆಯಾದ ‘ತಿರುಕ್ಕುರಳ್’ ಅನ್ನು ಪುಟಿನ್ ಅವರಿಗೆ ಉಡುಗೊರೆಯಾಗಿ ನೀಡುವ ಮೂಲಕ ಪ್ರಧಾನಿ ಮೋದಿ ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಿದರು. ಈ ನಡೆಗೆ ತಮಿಳುನಾಡು ಸೇರಿದಂತೆ ಇಡೀ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us