ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನೆವರಿ 12 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ: ಮುಖ್ಯಮಂತ್ರಿಗಳು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jan 09, 2023 | 4:19 PM

ಪ್ರಧಾನಿ ಮೋದಿಯವರು ನಾರಾಯಣಪುರ ಮತ್ತು ಕಲಬುರಗಿಯಲ್ಲಿ ನಡೆಯಲಿರುವ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಇದೆ, ಅದರೆ ಆವರ ಪಾಲ್ಗೊಳ್ಳುವಿಕೆ ಇನ್ನೂ ಖಚಿತವಾಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.

ಬೆಂಗಳೂರು: ನಾವು ಈಗಾಗಲೇ ವರದಿ ಮಾಡಿರುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಜನೆವರಿ 12 ರಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಬೆಂಗಳೂರಲ್ಲಿಂದು ವಿಷಯವನ್ನು ಖಚಿತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು, ಪ್ರಧಾನಿಗಳು ಅವತ್ತು ಯುವಜನೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾಡಲಿದ್ದು ಅದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಗಮಿಸಲಿರುವ ಯುವ ಪ್ರತಿನಿಧಿಗಳು (youth representatives) ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಆದಾದ ಒಂದು ವಾರದ ಬಳಿಕ ಪ್ರಧಾನಿ ಮೋದಿಯವರು ನಾರಾಯಣಪುರ ಮತ್ತು ಕಲಬುರಗಿಯಲ್ಲಿ ನಡೆಯಲಿರುವ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಇದೆ, ಅದರೆ ಆವರ ಪಾಲ್ಗೊಳ್ಳುವಿಕೆ ಇನ್ನೂ ಖಚಿತವಾಗಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ