ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ಥಕ ಆಡಳಿತ: ಅಭಿವೃದ್ಧಿಯ ಪಥದಲ್ಲಿ ಭಾರತ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 25 ವರ್ಷಗಳ ಆಡಳಿತದಲ್ಲಿ ಭಾರತದ ಅಭಿವೃದ್ಧಿಯಲ್ಲಿ ಮಹಾಕ್ರಾಂತಿಯನ್ನೇ ಮಾಡಿದ್ದಾರೆ. ಸಿಎಂ ಹಾಗೂ ಪಿಎಂ ಆಗಿ, ಅವರು ಮೂಲಸೌಕರ್ಯ, ಆರ್ಥಿಕತೆ, ಭದ್ರತೆ, ಮತ್ತು ಜನ ಕಲ್ಯಾಣ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್, ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಅಭಿವೃದ್ಧಿ, ಮತ್ತು ಡಿಜಿಟಲ್ ಪಾವತಿ ವ್ಯವಸ್ಥೆಯ ವಿಸ್ತರಣೆಯು ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ.
ನವದೆಹಲಿ, ಅಕ್ಟೋಬರ್ 07: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಕಳೆದ 25 ವರ್ಷಗಳ ಆಡಳಿತದಲ್ಲಿ ಭಾರತದ ರಾಜಕೀಯ ಮತ್ತು ಅಭಿವೃದ್ಧಿ ಪಥದಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದ್ದಾರೆ. ಗುಜರಾತ್‌ನಿಂದ ದಿಲ್ಲಿಯ ಗದ್ದುಗೆಯವರೆಗೆ ಅವರ ಪ್ರಯಾಣವು ಆರ್ಥಿಕತೆ, ಭದ್ರತೆ ಮತ್ತು ಜನ ಕಲ್ಯಾಣಕ್ಕೆ ಆದ್ಯತೆ ನೀಡಿದೆ.
ಮೋದಿಯವರ ನಾಯಕತ್ವದಲ್ಲಿ, ಭಾರತವು ಮೂಲಸೌಕರ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಪ್ರಗತಿ ಕಂಡಿದೆ. ವಿಮಾನ ನಿಲ್ದಾಣಗಳು, ರಸ್ತೆಗಳು, ಸುರಂಗಮಾರ್ಗಗಳು ಮತ್ತು ರೈಲ್ವೆ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ. ಮೇಕ್ ಇನ್ ಇಂಡಿಯಾ ಪರಿಕಲ್ಪನೆಯಡಿ ದೇಶೀಯವಾಗಿ ನಿರ್ಮಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಂತಹ ಯೋಜನೆಗಳು ಜಾಗತಿಕ ಗಮನ ಸೆಳೆದಿವೆ.
ಡಿಜಿಟಲ್ ಕ್ರಾಂತಿಯು ದೇಶದಲ್ಲಿ ಹಣಕಾಸು ಒಳಗೊಳ್ಳುವಿಕೆಗೆ ಕಾರಣವಾಗಿದೆ. ಯುಪಿಐ ವ್ಯವಸ್ಥೆ ವಿಶ್ವದಲ್ಲೇ ಅತಿ ಹೆಚ್ಚು ಡಿಜಿಟಲ್ ಪಾವತಿಗಳಿಗೆ ಕಾರಣವಾಗಿದೆ. 2047ರ ವಿಕಸಿತ ಭಾರತದ ಸಂಕಲ್ಪದೊಂದಿಗೆ, ಪ್ರಧಾನಿ ಮೋದಿ ಅವರು ಭಾರತವನ್ನು ಮತ್ತಷ್ಟು ಪ್ರಗತಿಯತ್ತ ಕೊಂಡೊಯ್ಯುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

