ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳಿಂದಲೇ ನಾವೆಲ್ಲ ಗೆಲ್ಲಲಿದ್ದೇವೆ: ಯದುವೀರ್ ಕೃಷ್ಣದತ್ ಒಡೆಯರ್

|

Updated on: May 03, 2024 | 11:43 AM

ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯದುವೀರ್, ಆ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಮತ್ತು ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ, ತನಿಖೆ ಪೂರ್ಣಗೊಂಡ ಬಳಿಕ ತಾನು ಹೇಳಿಕೆ ನೀಡುವುದಾಗಿ ಹೇಳಿದರು.

ದಾವಣಗೆರೆ: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ (Gayathri Siddeshwara) ಪರ ಪ್ರಚಾರ ಮಾಡಲು ನಗರಕ್ಕೆ ಅಗಮಿಸಿರುವ ಯದುವೀರ್ ಕೃಷ್ಣದತ್ ಒಡೆಯರ್ (Yaduveer Krishna Dutt Wodeyar) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ ರಾಜ್ಯದಲ್ಲೂ ಮೋದಿ ಅಲೆ (Modi wave) ಇದೆ, ಜನರೆಲ್ಲ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ, ಮೊದಲ ಹಂತದ ಮತದಾನ ನಡೆದ ಎಲ್ಲ 14 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು. ಮೋದಿಯವರ ಎರಡನೇ ಅವಧಿಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ, ದೇಶದ ಆರ್ಥಿಕ ಸ್ಥಿತಿಯಲ್ಲಿ ಮಹತ್ತರ ಬದಲಾವಣೆಯಾಗಿದೆ ಅವರು ವಿಶ್ವನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಯದುವೀರ್ ಹೇಳಿದರು. ಬಿಜೆಪಿ ಸಾಧನೆ ಏನೂ ಇಲ್ಲ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಅದರೆ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಭಾರತ ಕಂಡಿರುವ ಅಭಿವೃದ್ಧಿ ನಮ್ಮ ಕಣ್ಣ ಮುಂದಿದೆ, ಅವರ ಸಾಧನೆಗಳ ಫಲದಿಂದಲೇ ನಾವೆಲ್ಲ ಗೆಲ್ಲೋದು ಎಂದು ಅವರು ಹೇಳಿದರು. ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯದುವೀರ್, ಆ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಮತ್ತು ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ, ತನಿಖೆ ಪೂರ್ಣಗೊಂಡ ಬಳಿಕ ತಾನು ಹೇಳಿಕೆ ನೀಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:   Yaduveer: ಜನರ ಆಶೀರ್ವಾದದಿಂದ ನೀವು ಸಂಸತ್ತಿಗೆ ಬರುತ್ತೀರಿ: ಯದುವೀರ್​ಗೆ ಪ್ರಧಾನಿ ಮೋದಿ ಪತ್ರ