ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದು; ಪರಮೇಶ್ವರ್ ಹೀಗಂದಿದ್ಯಾಕೆ? ವಿಡಿಯೋ ನೋಡಿ

|

Updated on: Jun 14, 2024 | 11:07 AM

ಲೈಂಗಿಕ ದೌರ್ಜನ್ಯ ಪ್ರಕರಣ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ತಂದೊಡ್ಡಿದೆ. ಒಂದೆಡೆ, ಇದು ಕಾಂಗ್ರೆಸ್​ನ ರಾಜಕೀಯ ಕುತಂತ್ರ ಎಂದು ಬಿಜೆಪಿ ಆರೋಪಿಸಿದರೆ, ಇದರಲ್ಲಿ ರಾಜಕೀಯ ಇಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ಮಧ್ಯೆ, ಯಡಿಯೂರಪ್ಪ ಬೇಗ ಬಂದರೆ ಒಳ್ಳೆಯದೆಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ವಿಡಿಯೋ ಇಲ್ಲಿದೆ.

ಬೆಂಗಳೂರು, ಜೂನ್ 14: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರಿಗೆ (BS Yediyurappa) ವಾರಂಟ್ ಜಾರಿಯಾಗಿದೆ. ಅವರು ಬೇಗ ಬಂದರೆ ಒಳ್ಳೆಯದು. ಇಲ್ಲದಿದ್ರೆ ಅವರನ್ನು ಕರೆದುಕೊಂಡು ಬರುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪರಿಂದ ಪ್ರಕರಣ ಸಂಬಂಧ ಪೊಲೀಸರು ಮಾಹಿತಿ ಪಡೆಯಲಿದ್ದಾರೆ. ನಂತರ ಕಾನೂನು ಪ್ರಕಾರವೇ ಕ್ರಮತೆಗೆದುಕೊಳ್ಳುತ್ತಾರೆ. ಯಡಿಯೂರಪ್ಪ ದೆಹಲಿಯಲ್ಲಿ ಇದ್ದಾರೆ ಎನ್ನುತ್ತಿದ್ದಾರೆ. ಸೋಮವಾರ ಬರೋದಾಗಿ ಅವರು ಹೇಳಿದ್ದಾರೆ ಎಂದರು.

ಬಿಜೆಪಿಯವರು ಸೇಡಿನ ರಾಜಕಾರಣ ಎಂದು ಆರೋಪಿಸುತ್ತಾರೆ. ಅವರು ಸುಮ್ಮನೆ ಕಥೆ ಕಟ್ಟುತ್ತಿದ್ದಾರೆ. ಇದರಲ್ಲಿ ರಾಹುಲ್ ಗಾಂಧಿ ಏಕೆ ಭಾಗಿಯಾಗುತ್ತಾರೆ ಹೇಳಿ? ಇದರಲ್ಲಿ ರಾಹುಲ್ ಗಾಂಧಿ ಭಾಗಿ ಆಗಿಲ್ಲ ಎಂದು ಪರಮೇಶ್ವರ ತಿಳಿಸಿದರು.

ಇದನ್ನೂ ಓದಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಪೊಲೀಸ್​ ಠಾಣೆಯಲ್ಲಿ ದರ್ಶನ್​ಗೆ ರಾಜಾತಿಥ್ಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಯಾರು ಕೂಡ ಆರೋಪಿಗೆ ರಾಜಾತಿಥ್ಯ ಕೊಡಲು ಸಾಧ್ಯವಿಲ್ಲ. ತನಿಖೆ ಮಾಡಲು ಪೊಲೀಸರನ್ನು ಫ್ರೀಯಾಗಿ ಬಿಡಬೇಕು ಎಂದರು. ಜನರ ಹಿತದೃಷ್ಟಿಯಿಂದ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಹೇಳುತ್ತೇನೆ. ಬಿರಿಯಾನಿ ಕೊಟ್ಟ ಬಗ್ಗೆಯೂ ನಾನು ಪೊಲೀಸರಿಗೆ ಕೇಳಿದೆ, ಹಾಗೇನೂ ಇಲ್ಲ ಅಂದಿದ್ದಾರೆ. ಎಲ್ಲ ಆರೋಪಿಗಳಂತೆ ಇವರನ್ನೂ ನೋಡ್ತಿದ್ದೇವೆ ಅಂದರು. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ