ಪೋಕ್ಸೋ ಕೇಸ್: ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ಮಠದಲ್ಲಿ ಕಲಿಯುತ್ತಿದ್ದ ಬಾಲಕನಿಗೆ ಬೆದರಿಕೆ ಹಾಕಿ, ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿಯ ದೂರಿನ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸರು ಇಂದು (ಮೇ 14) ಸತತ 3 ಗಂಟೆಗಳ ಕಾಲ ಸ್ವಾಮೀಜಿಯನ್ನು ವಿಚಾರಣೆ ನಡೆಸಿ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯ್ತು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ದುರ್ಗೋಜಿ ಅವರು ವಚನಾನಂದ ಸ್ವಾಮೀಜಿಯನ್ನು ವೈದ್ಯಕೀಯ ಪರೀಕ್ಷೆ ಮಾಡಿದ್ದು, ವರದಿ ಪಾಸಿಟಿವ್ ಬರುವ ಸಾಧ್ಯತೆ ಕಡಿಮೆ ಎಂದಿದ್ದಾರೆ.
ದಾವಣಗೆರೆ, (ಮೇ 14): ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananda Swamiji) ವಿರುದ್ಧ ಮಠದಲ್ಲಿ ಕಲಿಯುತ್ತಿದ್ದ ಬಾಲಕನಿಗೆ ಬೆದರಿಕೆ ಹಾಕಿ, ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿಯ ದೂರಿನ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸರು ಇಂದು (ಮೇ 14) ಸತತ 3 ಗಂಟೆಗಳ ಕಾಲ ಸ್ವಾಮೀಜಿಯನ್ನು ವಿಚಾರಣೆ ನಡೆಸಿ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯ್ತು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ದುರ್ಗೋಜಿ ಅವರು ವಚನಾನಂದ ಸ್ವಾಮೀಜಿಯನ್ನು ವೈದ್ಯಕೀಯ ಪರೀಕ್ಷೆ ಮಾಡಿದ್ದು, ವರದಿ ಪಾಸಿಟಿವ್ ಬರುವ ಸಾಧ್ಯತೆ ಕಡಿಮೆ ಎಂದಿದ್ದಾರೆ.
ಈ ಬಗ್ಗೆ ಟಿವಿ9 ಜತೆ ಮಾತನಾಡಿರುವ ಡಾ.ರಾಘವೇಂದ್ರ ದುರ್ಗೋಜಿ , ಘಟನೆ ನಡೆದು ಬಹಳ ದಿನವಾಗಿದೆ. ಇದರಿಂದ ವರದಿ ಪಾಸಿಟಿವ್ ಬರುವ ಸಾಧ್ಯತೆ ಕಡಿಮೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಉಗುರು ಕೂದಲು ಮಾದರಿ, ಪುರುಷತ್ವ, ರಕ್ತ ಮಾದರಿ ಸಂಗ್ರಹ ಸೇರಿದಂತೆ ತನಿಖಾಧಿಕಾರಿಗಳ ಬೇಡಿಕೆಗೆ ಅನುಗುಣವಾಗಿ ಪರೀಕ್ಷೆ ಮಾಡಲಾಗಿದೆ. ಸ್ವಾಮೀಜಿ ಎಲ್ಲ ರೀತಿ ಸದೃಢ ಆಗಿದ್ದಾರೆ. ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್: ಸ್ವಾಮೀಜಿ ಹೇಳಿದ್ದಿಷ್ಟು
Published on: May 14, 2026 05:09 PM
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

