AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ

ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Feb 25, 2026 | 5:44 PM

Share

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case)  ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ'ಗೆ (Singer music mailari )  ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿ ಇಂದು (ಫೆಬ್ರವರಿ 25) ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಟಿವಿ9ಗೆ ಪ್ರತಿಕ್ರಿಯಿಸಿರುವ ಮೈಲಾರಿ, ಡಾ ಅಂಬೇಡ್ಕರ್ ಅವರ ಸಂವಿಧಾನದೊಳಗೆ ನಾವು ಕಾನೂನಾತ್ಮಕವಾಗಿಯೇ ಹೋರಾಟ ‌ಮಾಡುತ್ತಿದ್ದೇವೆ‌. ಯಾವುದು ಸರಿ ಯಾವುದು ತಪ್ಪು ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆ. ನ್ಯಾಯಾಲಯದ ತೀರ್ಪಿಗೆ,ಕಾನೂನಿಗೆ ನಾನು ತಲೆ ಬಾಗುತ್ತೇನೆ. ಕೋರ್ಟ್ ತೀರ್ಮಾನಕ್ಕೆ ನಾನು ಬದ್ದವಾಗಿರುತ್ತೇನೆ‌ ಎಂದರು.

ಬಾಗಲಕೋಟೆ, (ಫೆಬ್ರವರಿ 25): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case)  ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ಗೆ (Singer music mailari )  ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿ ಇಂದು (ಫೆಬ್ರವರಿ 25) ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಟಿವಿ9ಗೆ ಪ್ರತಿಕ್ರಿಯಿಸಿರುವ ಮೈಲಾರಿ, ಡಾ ಅಂಬೇಡ್ಕರ್ ಅವರ ಸಂವಿಧಾನದೊಳಗೆ ನಾವು ಕಾನೂನಾತ್ಮಕವಾಗಿಯೇ ಹೋರಾಟ ‌ಮಾಡುತ್ತಿದ್ದೇವೆ‌. ಯಾವುದು ಸರಿ ಯಾವುದು ತಪ್ಪು ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆ. ನ್ಯಾಯಾಲಯದ ತೀರ್ಪಿಗೆ,ಕಾನೂನಿಗೆ ನಾನು ತಲೆ ಬಾಗುತ್ತೇನೆ. ಕೋರ್ಟ್ ತೀರ್ಮಾನಕ್ಕೆ ನಾನು ಬದ್ದವಾಗಿರುತ್ತೇನೆ‌ ಎಂದರು.

ಇನ್ನು ಇದೇ ವೇಳೆ ತಮ್ಮ ಆರ್ಕೆಸ್ಟ್ರಾ ಬಗ್ಗೆ ಮಾತನಾಡಿದ ಮೈಲಾರಿ, ಸದ್ಯಕ್ಕೆ ಏನು‌ ನಿರ್ಧಾರ ಇಲ್ಲ.ಪತ್ನಿಗೆ ಹೆರಿಗೆಯಾಗಿದೆ. ನನ್ನ ತಾಯಿಗೆ ಹುಷಾರಿಲ್ಲ. ಸ್ವಲ್ಪ ಮಾನಸಿಕವಾಗಿ ಬೇಸರವಾಗಿದೆ. ಹೀಗಾಗಿ ಸದ್ಯಕ್ಕೆ ಕಾರ್ಯಕ್ರಮದ ಬಗ್ಗೆ ಯಾವುದೇ ನಿರ್ಧಾರ ಮಾಡುವುದಿಲ್ಲ. ಸ್ವಲ್ಪ ದಿನ ಆದ ಮೇಲೆ ನೋಡೋಣ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಕೇಸ್​​ನಲ್ಲಿ ಜೈಲು ಪಾಲಾಗಿದ್ದ ಮ್ಯೂಸಿಕ್ ಮೈಲಾರಿಗೆ ಬಿಗ್ ರಿಲೀಫ್

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More