ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸ್ವಾಗತಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಟಸ್ಕ್, ಇಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವ್ಯಾಪಾರ ಒಪ್ಪಂದಗಳ ಕುರಿತು ಚರ್ಚಿಸಿದ್ದರು.
ಬೆಂಗಳೂರು, ಅಕ್ಟೋಬರ್ 23: ಪೋಲೆಂಡ್ ಪ್ರಧಾನಮಂತ್ರಿ ಡೊನಾಲ್ಡ್ ಫ್ರಾನ್ಸಿಸ್ಜೆಕ್ ಟಸ್ಕ್ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಸಚಿವ ಕೃಷ್ಣ ಬೈರೇಗೌಡ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಟಸ್ಕ್ ಅವರನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು. ಟಸ್ಕ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಇಂದು (ಅಕ್ಟೋಬರ್ 23) ರಾಜ್ಯದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಬೆಂಗಳೂರಿಗೆ ಆಗಮಿಸುವ ಮುನ್ನ, ಪ್ರಧಾನಮಂತ್ರಿ ಟಸ್ಕ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವ್ಯವಹಾರ ಒಪ್ಪಂದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆಗಳು ನಡೆದಿವೆ ಎಂದು ತಿಳಿದುಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

