ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್

Updated on: Oct 23, 2026 | 6:29 AM

ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಬೆಂಗಳೂರಿಗೆ ಆಗಮಿಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸ್ವಾಗತಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಟಸ್ಕ್, ಇಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವ್ಯಾಪಾರ ಒಪ್ಪಂದಗಳ ಕುರಿತು ಚರ್ಚಿಸಿದ್ದರು.

ಬೆಂಗಳೂರು, ಅಕ್ಟೋಬರ್ 23: ಪೋಲೆಂಡ್ ಪ್ರಧಾನಮಂತ್ರಿ ಡೊನಾಲ್ಡ್ ಫ್ರಾನ್ಸಿಸ್ಜೆಕ್ ಟಸ್ಕ್ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಸಚಿವ ಕೃಷ್ಣ ಬೈರೇಗೌಡ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಟಸ್ಕ್ ಅವರನ್ನು ಸ್ವಾಗತಿಸಿ ಗೌರವ ಸಲ್ಲಿಸಿದರು. ಟಸ್ಕ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಇಂದು (ಅಕ್ಟೋಬರ್ 23) ರಾಜ್ಯದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಬೆಂಗಳೂರಿಗೆ ಆಗಮಿಸುವ ಮುನ್ನ, ಪ್ರಧಾನಮಂತ್ರಿ ಟಸ್ಕ್ ಅವರು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವ್ಯವಹಾರ ಒಪ್ಪಂದಗಳಿಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More