ಹಾವೇರಿ: ಅರಣ್ಯ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವಾಗ ಪೊಲೀಸರು ಮಹಿಳೆ ಮತ್ತು ವೃದ್ಧರ ಮೇಲೆ ಮಾಡಿದ ಆರೋಪ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Nov 30, 2022 | 5:45 PM

ಕುಟುಂಬಗಳ ಸದಸ್ಯರು ಮನೆಯಲ್ಲಿದ್ದ ಮಹಿಳೆ ಮತ್ತು ವೃದ್ಧರ ಮೇಲೆ ಪೋಲಿಸರು ಹಲ್ಲೆ ನಡೆಸಿದ್ದಾರೆಂದು ಹೇಳಿರುವರಲ್ಲದೆ ನೋಟಿಸ್ ನೀಡದೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಹಾವೇರಿ: ಅರಣ್ಯ ಪ್ರದೇಶದ (forest area) ಜಾಗವನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡವನ್ನು ಪೊಲೀಸರ ನೆರವಿನೊಂದಿಗೆ ಅರಣ್ಯ ಇಲಾಖೆ ತೆರವುಗೊಳಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ಕುಟಂಬಗಳ ಸದಸ್ಯರು ಆರೋಪಿಸಿದ್ದಾರೆ. ಘಟನೆ ನಡೆದಿರೋದು ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರ ತಾಲ್ಲೂಕಿನ ಖಂಡೆರಾಯನಹಳ್ಳಿ (Khanderayanahalli) ಗ್ರಾಮದಲ್ಲಿ. ಅರಣ್ಯ ಪ್ರದೇಶದ ಸ್ಥಳವನ್ನು ಒತ್ತುವರಿ ಮಾಡಿಕೊಂಡಿದ್ದರು ಎಂದು ಹೇಳಲಾಗಿರುವ ಕುಟುಂಬಗಳ ಸದಸ್ಯರು ಮನೆಯಲ್ಲಿದ್ದ ಮಹಿಳೆ ಮತ್ತು ವೃದ್ಧರ ಮೇಲೆ ಪೋಲಿಸರು ಹಲ್ಲೆ ನಡೆಸಿದ್ದಾರೆಂದು ಹೇಳಿರುವರಲ್ಲದೆ ನೋಟಿಸ್ ನೀಡದೆ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ