Chandrashekhar Guruji Murder: ಆರೋಪಿಗಳ ಬಂಧನದ ಇಡೀ ಕಾರ್ಯಾಚರಣೆ ವಿಡಿಯೋ ಇಲ್ಲಿದೆ ನೋಡಿ
ಹುಬ್ಬಳ್ಳಿ ಪೊಲೀಸರಿಗೆ ಆರೋಪಿಗಳಿಂದಲೇ ಕರೆ ಬಂದ ಬಳಿಕ ಕೂಡಲೇ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಳಿಕ ಹುಬ್ಬಳ್ಳಿ ಪೊಲೀಸರ ಮಾಹಿತಿಯ ಮೇರೆಗೆ ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಆರೋಪಿಗಳನ್ನು ಬಂಧಿಸಿದೆ.
ಹುಬ್ಬಳ್ಳಿ: ಖ್ಯಾತ ಸರಳವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಯನ್ನ ಭೀಕರವಾಗಿ ಕೊಲೆ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆದ್ರೆ ಆರೋಪಿಗಳೇ ಪೊಲೀಸರಿಗೆ ಕರೆ ಮಾಡಿ ತಾವು ಇರುವ ಸ್ಥಳದ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ, ರಾಮದುರ್ಗ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಾಮದುರ್ಗದಲ್ಲಿ ಅರೆಸ್ಟ್ ಮಾಡಿದ್ದಾರೆ. ಆದ್ರೆ ಆರೋಪಿಗಳು ಅರೆಸ್ಟ್ ಆಗಿದ್ದೇ ರೋಚಕ. ಕೊಲೆಯ ಬಳಿಕ ಹಂತಕರು ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಆರೋಪಿಗಳು ಹುಬ್ಬಳ್ಳಿ ಪೊಲೀಸರಿಗೆ ಖುದ್ದು ಕರೆ ಮಾಡಿ ಬೆಳಗಾವಿ ಕಡೆ ಹೋಗುತ್ತಿದ್ದೇವೆಂದು ಮಾಹಿತಿ ನೀಡಿ ಅರೆಸ್ಟ್ ಆಗಿದ್ದಾರೆ.
ಹುಬ್ಬಳ್ಳಿ ಪೊಲೀಸರಿಗೆ ಆರೋಪಿಗಳಿಂದಲೇ ಕರೆ ಬಂದ ಬಳಿಕ ಕೂಡಲೇ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಳಿಕ ಹುಬ್ಬಳ್ಳಿ ಪೊಲೀಸರ ಮಾಹಿತಿಯ ಮೇರೆಗೆ ಡಿಎಸ್ಪಿ ರಾಮನಗೌಡ ಹಟ್ಟಿ ನೇತೃತ್ವದ ತಂಡ ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಆರೋಪಿಗಳನ್ನು ಬಂಧಿಸಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಹೆದರಿದ ಹಂತಕರು ಪೊಲೀಸರಿಗೆ ಮಾಹಿತಿ ನೀಡಿ ಖುದ್ದು ಅರೆಸ್ಟ್ ಆಗಿದ್ದಾರೆ.