ಜಮೀರ್ ವಿರುದ್ಧ ಅವಹೇಳನಕಾರಿ ಪೋಸ್ಟ್ , ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ಜಮೀರ್ ವಿರುದ್ಧ ಅವಹೇಳನಕಾರಿ ಪೋಸ್ಟ್ , ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 14, 2024 | 10:16 AM

ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ನೀಡಿದ ದೂರಿನ ಮೇರೆಗೆ ಪುನೀತ್ ಬಂಧನವಾಗಿದೆ. ವಕ್ಫ್ ಭೂ ವಿವಾದಗಳಿಗೆ ಸಂಬಂಧಿಸಿದಂತೆ ರೈತರಿಗೆ ಅಧಿಕಾರಿಗಳ ಮೂಲಕ ನೋಟೀಸ್ ಗಳನ್ನು ಜಾರಿ ಮಾಡಿಸಿದ ಹಿನ್ನೆಲೆಯಲ್ಲಿ ಜಮೀರ್ ಅಹ್ಮದ್ ಸುದ್ದಿಯಲ್ಲಿದ್ದರು ಮತ್ತು ಬಿಜೆಪಿ ರೈತರ ಪರ ರಾಜ್ಯವ್ಯಾಪಿ ಹೋರಾಟ ನಡೆಸಿತ್ತು.

ಬೆಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿ ವಿವಾದಾತ್ಮಕ ಸಚಿವರೆನಿಸಿಕೊಂಡಿರುವ ಬಿಜೆಡ್ ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆ ಪೊಲೀಸರು ಪುನೀತ್​ರನ್ನು ನಿನ್ನೆ ರಾತ್ರಿ ಬಂಧಿಸಿ, ನ್ಯಾಯಾಧೀಶರೊಬ್ಬರ ಮುಂದೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೇವೇಗೌಡರ ಕುಟುಂಬವನ್ನು ಖರೀದಿಸುವ ಮಾತು ನಾನಾಡಿಲ್ಲ: ಜಮೀರ್ ಅಹ್ಮದ್ ಖಾನ್