ಕಾಂಗ್ರೆಸ್ ಯುವ ನಾಯಕರಿಂದ ಬಿಜೆಪಿ ಕಚೇರಿ ಮುತ್ತಿಗೆ ಯತ್ನ, ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಿಜೆಪಿ ನಾಯಕರು
ಕಾಂಗ್ರೆಸ್ ಯುವ ನಾಯಕರು ಪದೇಪದೆ ಬಿಜೆಪಿ ಕಚೇರಿ ಬಳಿ ಬಂದು ಪ್ರತಿಭಟನೆ ನಡೆಸುತ್ತಿರುವುದರ ವಿರುದ್ಧ ಬಿಜೆಪಿ ನಾಯಕರು ತೀವ್ರ ಅಸಮಾಧಾನ ಮತ್ತು ಆಕ್ಷೇಪ ವ್ಯಕ್ತಪಡಿಸಿದರು. ಅವರನ್ನು ಕಚೇರಿವರೆಗೆ ಬರಲು ಯಾಕೆ ಬಿಡಲಾಗುತ್ತಿದೆ ಎಂದು ಪೊಲೀಸರನ್ನು ಪ್ರಶ್ನಿಸಿದರು. ನಂತರ, ಇಂದಿರಾ ಗಾಂಧಿ, ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ನಾಯಕರು ಘೋಷಣೆ ಕೂಗಿದರು.
ಬೆಂಗಳೂರು, ಜೂನ್: ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗಿ ನಿಂತು ಕಿತ್ತಾಡುವುದನ್ನು ಪೊಲೀಸರು ತಪ್ಪಿಸಿದರು. ದಿವಂಗತ ಇಂದಿರಾ ಗಾಂಧಿ (late Indira Gandhi) ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರು, ನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯನ್ನು ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯನ್ನು ಕಾಂಗ್ರೆಸ್ ಕಾರ್ಯಕರ್ತರು ಎರಡು ಬಾರಿ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರು. ವಿಷಯ ಗೊತ್ತಾಗುತ್ತಿದ್ದಂತೆಯೇ ಬಿಜೆಪಿ ಮುಖಂಡರು ಕಚೇರಿಯತ್ತ ಧಾವಿಸಿದರು. ಆದರೆ ಅಷ್ಟರಲ್ಲಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ವ್ಯಾನಲ್ಲಿ ಕರೆದೊಯ್ದರು.
ಇದನ್ನೂ ಓದಿ: ಕೈ ಶಾಸಕರ ಹೆಸರೇಳಿ ಆತ್ಮಹತ್ಯೆಗೆ ಶರಣಾದ ವಿನಯ್ ಯಾರು? ಬಿಜೆಪಿ ನಾಯಕರು ಸಿಡಿದೇಳಲು ಕಾರಣವೇನು?
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ