ಡಿಎನ್ಎ ಟೆಸ್ಟ್ ಮಾಡಿಸಲು ಆಸ್ಪತ್ರೆಗೆ ತೆರಳುವಾಗಿ ಟೆನ್ಷನ್ ಆದ ಪವಿತ್ರಾ ಗೌಡ
ಡಿಎನ್ಎ ಟೆಸ್ಟ್ ಸಲುವಾಗಿ ಇಂದು (ಜೂನ್ 19) ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಯಿತು. ಈ ವೇಳೆ ಪೊಲೀಸ್ ವ್ಯಾನ್ನಲ್ಲಿ ಕುಳಿತಿದ್ದ ನಟಿ ಪವಿತ್ರಾ ಗೌಡ ಸಖತ್ ಆತಂಕದಲ್ಲಿ ಇದ್ದಂತೆ ಕಾಣಿಸಿತು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚುರುಕುಕೊಂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಮತ್ತು ಮೃತನ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.
ನಟಿ ಪವಿತ್ರಾ ಗೌಡ (Pavithra Gowda) ಅವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಹತ್ಯೆ ಕೇಸ್ನಲ್ಲಿ ಅವರು ಎ1 ಆಗಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆ ಕಾರಣಕ್ಕಾಗಿಯೇ ಆತನನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಲಾಯಿತು ಎಂಬ ಆರೋಪ ಇದೆ. ಕೊಲೆ ನಡೆದ ಸ್ಥಳದಲ್ಲಿ ಅನೇಕ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಈಗ ಆರೋಪಿಗಳ ಡಿಎನ್ಎ ಟೆಸ್ಟ್ (DNA Test) ಮಾಡಿಸಲಾಗಿದೆ. ಘಟನೆಯ ಸ್ಥಳದಲ್ಲಿ ಸಿಕ್ಕ ಕೂದಲು, ರಕ್ತಕ್ಕೆ ಆರೋಪಿಗಳ ಸ್ಯಾಂಪಲ್ಸ್ ಮ್ಯಾಚ್ ಆಗಲಿದೆಯಾ ಎಂದು ಪರೀಕ್ಷೆ ಮಾಡಲಾಗುತ್ತಿದೆ. ಡಿಎನ್ಎ ಪರೀಕ್ಷೆ ಸಲುವಾಗಿ ಪವಿತ್ರಾ ಗೌಡ ಸೇರಿ 9 ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ಪೊಲೀಸ್ ವ್ಯಾನ್ನಲ್ಲಿ ಕುಳಿತ ಪವಿತ್ರಾ ಗೌಡ ಸಿಕ್ಕಾಪಟ್ಟೆ ಆತಂಕದಲ್ಲಿ ಇದ್ದಂತೆ ಕಾಣಿಸಿತು. ಪೊಲೀಸ್ ಕಸ್ಟಡಿ ಸದ್ಯದಲ್ಲೇ ಕೊನೆಗೊಳ್ಳಲಿದೆ. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ. ಒಂದು ವೇಳೆ ಆ ರೀತಿ ಆದರೆ ಜೈಲಿನಲ್ಲಿ ಪವಿತ್ರಾ ಗೌಡ ಕಾಲ ಕಳೆಯಬೇಕಾಗುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.