ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಕೊಲೆಯಲ್ಲಿ ಅವರ ಪಾತ್ರವೂ ಇದೆ ಎನ್ನಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ.

ಕೊಲೆ ಕೇಸ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಸಿಕ್ಕಿವೆ 30ಕ್ಕೂ ಅಧಿಕ ಸಾಕ್ಷಿ
|

Updated on: Jun 28, 2024 | 8:22 AM

ನಟ ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಮಾಡಿದ ಆರೋಪವನ್ನು ಅವರು ಹೊತ್ತಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್ ವಿರುದ್ಧ ಸುಮಾರು 30ಕ್ಕೂ ಅಧಿಕ ಸಾಕ್ಷ್ಯಗಳು ಸಿಕ್ಕಿವೆ ಎಂದು ವರದಿ ಆಗಿದೆ. ‘ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ’ ಎಂದು ದರ್ಶನ್ ಹೇಳಿದ್ದರು. ಆದರೆ, ಪೊಲೀಸರ ವಿಚಾರಣೆ ವೇಳೆ ಹಲವು ದಾಖಲೆಗಳು ದೊರೆತಿವೆ. ದರ್ಶನ್ ಕೊಲೆ ಮಾಡುವ ಸಂದರ್ಭದಲ್ಲಿ ಅಲ್ಲಿ ಇದ್ದರು ಎಂಬುದನ್ನು ಇವು ಸಾಬೀತು ಮಾಡುವಂತಿದೆ. ಇದೆಲ್ಲವೂ ದರ್ಶನ್​ಗೆ ಮುಳುವಾಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow us