ಫೈನಾನ್ಸ್ ಕಿರುಕುಳದಿಂದ ಸಾವಿಗೆ ಶರಣಾದ ವ್ಯಕ್ತಿಯ ತಾಯಿಯನ್ನು ಭೇಟಿಯಾದ ಪೊಲೀಸ್ ಕಮೀಶನರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 19, 2025 | 6:08 PM

ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಮಾಡಿರುವ ಶಶಿಕುಮಾರ್ ಶಿವಾನಂದನ ತಾಯಿಗೆ ಸಾಂತ್ವನ ಹೇಳುವಾಗ, ಸಾಲ ವಸೂಲಾತಿಗೆ ಬರುವ ಸಿಬ್ಬಂದಿ ಕಿರುಕುಳ ನೀಡಿದರೆ ಅದನ್ನು ಕೂಡಲೇ ಪೊಲೀಸರ ಗಮನಕ್ಕೆ ತರಬೇಕು, ಇಲ್ಲದಿದ್ದರೆ ಪೊಲೀಸರಿಗೆ ಗೊತ್ತಾಗೋದು ಹೇಗೆ? ಪೊಲೀಸರಿಗೆ ಮಾಹಿತಿ ನೀಡಿದರೆ ಕ್ರಮ ತೆಗೆದುಕೊಳ್ಳಲು ಸಹಾಯವಾಗುತ್ತದೆ ಎಂದು ಹೇಳಿದರು.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಶನರ್ ಎನ್ ಶಶಿಕುಮಾರ್ ಇಂದು ಕಿಮ್ಸ್ ಆವರಣಕ್ಕೆ ತೆರಳಿ ಮೈಕ್ರೋ ಫೈನಾನ್ಸ್ ಸಂಸ್ಥೆಯೊಂದರ ಸಿಬ್ಬಂದಿಯು ನೀಡುತ್ತಿದ್ದ ಕಿರುಕುಳ ತಾಳಲಾಗದೆ ಹುಬ್ಬಳ್ಳಿಯ ಉಣ್ಕಲ್ ಕೆರೆಗೆ ಹಾರಿ ಪ್ರಾಣಬಿಟ್ಟನೆಂದು ಹೇಳಲಾಗುತ್ತಿರುವ ಶಿವಾನಂದ ಕಳ್ಳೀಮನಿಯ ತಾಯಿ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಶಿವಾನಂದನ ಸಾವಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದರು. ಶಶಿಕುಮಾರ್ ಅವರನ್ನು ಕಂಡೊಡನೆ ಕಿಮ್ಸ್ ಶವಾಗಾರದ ಆವರಣದಲ್ಲಿ ಕೂತು ಮಗನ ಸಾವಿಗೆ ಒಂದೇ ಸಮನೆ ರೋದಿಸುತ್ತಿದ್ದ ತಾಯಿ ಕಾಲಿಗೆ ಬೀಳಲು ಮುಂದಾಗುತ್ತಾರೆ. ಅಧಿಕಾರಿಯು ಸಾಲ ಮತ್ತು ಸಾವಿಗೆ ಸಂಬಂಧಿಸಿದ ಎಲ್ಲ ವಿವರಗಳನ್ನು ಅವರಿಂದ ಪಡೆಯುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸುಗ್ರೀವಾಜ್ಞೆ ಜಾರಿಗೆ ಬಂದರೂ ನಿಲ್ಲದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ, ಹುಬ್ಬಳ್ಳಿಯಲ್ಲಿ ಒಬ್ಬ ವ್ಯಕ್ತಿ ಬಲಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.