ಸಂಸದ ತೇಜಸ್ವೀ ಸೂರ್ಯ ಮನೆಗೆ ಮುತ್ತಿಗೆ ಹಾಕಲು ಹೋದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು
ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯ ಅಂಗವಾಗಿ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಿ ಕಲ್ಲುಗಳನ್ನು ಮತ್ತು ಹೂಗಳನ್ನು ಉಡುಗೊರೆಯಾಗಿ ನೀಡಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.
ಬೆಂಗಳೂರು: ಬಿಜೆಪಿ ಸಂಸದ ತೇಜಸ್ವೀ ಸೂರ್ಯ (Tejasvi Surya) ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ರೆ ಕಲ್ಲು ಹೊಡೆಯಬಹುದಿತ್ತು ಅಂತ ತಮ್ಮ ಕಾರ್ಯಕರ್ತನೊಬ್ಬನಿಗೆ ಹೇಳಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಶನಿವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು (Congress workers) ಪ್ರತಿಭಟನೆಯ ಅಂಗವಾಗಿ ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಿ ಕಲ್ಲುಗಳನ್ನು (stones) ಮತ್ತು ಹೂಗಳನ್ನು ಉಡುಗೊರೆಯಾಗಿ ನೀಡಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.
Loading...
Unable to load recommendations.
Follow Us
