AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 30, 2026 | 8:33 PM

Share

ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ಕಾರ್ಯಕ್ರಮದಲ್ಲಿ ಭಾಗಯಾಗಲು ಧಾರವಾಡಕ್ಕೆ ಆಗಮಿಸಿದ್ದ ನಟ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಎಬಿವಿಪಿ, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ತಡೆದಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೂ ನುಗ್ಗಲು ಪ್ರಯತ್ನಿಸಿದ್ದಾರೆ. ಇದರಿಂದ ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆಯೇ ಪೊಲೀಸರು, ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಧಾರವಾಡ, (ಆಗಸ್ಟ್ 30): ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ಕಾರ್ಯಕ್ರಮದಲ್ಲಿ ಭಾಗಯಾಗಲು ಧಾರವಾಡಕ್ಕೆ ಆಗಮಿಸಿದ್ದ ನಟ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಎಬಿವಿಪಿ, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ತಡೆದಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೂ ನುಗ್ಗಲು ಪ್ರಯತ್ನಿಸಿದ್ದಾರೆ. ಇದರಿಂದ ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆಯೇ ಪೊಲೀಸರು, ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಕಾರ್ಯಕರ್ತರನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶಹರ ಠಾಣೆಗೆ ಆಗಮಿಸಿ ಪೊಲೀಸರನ್ನು ತರಾಟೆ ತೆಗೆದುಕೊಂಡರು. ಆರ್ ಎಸ್ ಎಸ್ ಧಿಕ್ಕಾರ ಎಂದವರನ್ನೇಕೆ ಬಂಧಿಸಿಲ್ಲ. ಬಿಜೆಪಿ, ಎಬಿವಿಪಿಯವರನ್ನು ಮಾತ್ರ ಬಂಧಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ನಮ್ಮ ಬಗ್ಗೆ ಮಾತನಾಡಿದ್ದಾರೆ. ಅವರ ಪೈಕಿ ಒಬ್ಬರನ್ನೂ ಬಂಧಿಸಿಲ್ಲ. ಅವರನ್ನೂ ಬಂಧಿಸಬೇಕಲ್ಲವೇ? ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More