ಆತ್ಮಹತ್ಯೆ ವದಂತಿ: ಬಿಗ್ ಬಾಸ್ ಮನೆಗೆ ಬಂದು ಡ್ರೋನ್ ಪ್ರತಾಪ್ ಬಗ್ಗೆ ಮಾಹಿತಿ ಪಡೆದ ಪೊಲೀಸರು
ಡ್ರೋನ್ ಪ್ರತಾಪ್ ದಾಖಲಾಗಿದ್ದ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿದ್ದಾರೆ. ಹಾಗಾಗಿ ಒಂದಷ್ಟು ಅನುಮಾನಗಳು ಮೂಡಿವೆ. ಅಲ್ಲದೇ, ಬಿಗ್ ಬಾಸ್ ಮನೆಗೂ ಬಂದಿರುವ ಪೊಲೀಸರು ಡ್ರೋನ್ ಪ್ರತಾಪ್ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಕಿರುತೆರೆ ವೀಕ್ಷಕರ ಫೇವರಿಟ್ ಶೋ ಎನಿಸಿಕೊಂಡಿರುವ ‘ಬಿಗ್ ಬಾಸ್ ಕನ್ನಡ’ (Bigg Boss Kannada) ಬಗ್ಗೆ ಅನೇಕ ಸುದ್ದಿಗಳು ಕೇಳಿಬರುತ್ತಿವೆ. ಡ್ರೋನ್ ಪ್ರತಾಪ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಡ್ರೋನ್ ಪ್ರತಾಪ್ (Drone Prathap) ಅವರಿಗೆ ಫುಡ್ ಪಾಯ್ಸನ್ ಆಗಿದೆ ಎಂದು ಕೂಡ ಹೇಳಲಾಗಿದೆ. ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿದ್ದಾರೆ. ಹಾಗಾಗಿ ಒಂದಷ್ಟು ಅನುಮಾನಗಳು ಮೂಡಿವೆ. ಅಲ್ಲದೇ, ಬಿಗ್ ಬಾಸ್ ಮನೆಗೂ ಬಂದಿರುವ ಪೊಲೀಸರು ಡ್ರೋನ್ ಪ್ರತಾಪ್ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ‘ಬಿಗ್ ಬಾಸ್’ (BBK 10) ಫಿನಾಲೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಡ್ರೋನ್ ಪ್ರತಾಪ್ ಕುರಿತು ಶಾಕಿಂಗ್ ಸುದ್ದಿಗಳು ಹೊರಬಂದಿರುತ್ತಿವೆ. ಆಸ್ಪತ್ರೆಯಲ್ಲಿ ಅವರಿಗೆ ಹಲವು ಬಗೆಯ ಪರೀಕ್ಷೆಗಳನ್ನು ಮಾಡಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ

