ಆತ್ಮಹತ್ಯೆ ವದಂತಿ: ಬಿಗ್​ ಬಾಸ್​ ಮನೆಗೆ ಬಂದು ಡ್ರೋನ್​ ಪ್ರತಾಪ್​ ಬಗ್ಗೆ ಮಾಹಿತಿ ಪಡೆದ ಪೊಲೀಸರು

Updated on: Jan 04, 2024 | 4:25 PM

ಡ್ರೋನ್​ ಪ್ರತಾಪ್​ ದಾಖಲಾಗಿದ್ದ ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿದ್ದಾರೆ. ಹಾಗಾಗಿ ಒಂದಷ್ಟು ಅನುಮಾನಗಳು ಮೂಡಿವೆ. ಅಲ್ಲದೇ, ಬಿಗ್​ ಬಾಸ್​ ಮನೆಗೂ ಬಂದಿರುವ ಪೊಲೀಸರು ಡ್ರೋನ್​ ಪ್ರತಾಪ್​ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಕಿರುತೆರೆ ವೀಕ್ಷಕರ ಫೇವರಿಟ್​ ಶೋ ಎನಿಸಿಕೊಂಡಿರುವ ‘ಬಿಗ್​ ಬಾಸ್​ ಕನ್ನಡ’ (Bigg Boss Kannada) ಬಗ್ಗೆ ಅನೇಕ ಸುದ್ದಿಗಳು ಕೇಳಿಬರುತ್ತಿವೆ. ಡ್ರೋನ್​ ಪ್ರತಾಪ್​ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಡ್ರೋನ್​ ಪ್ರತಾಪ್​ (Drone Prathap) ಅವರಿಗೆ ಫುಡ್​ ಪಾಯ್ಸನ್​ ಆಗಿದೆ ಎಂದು ಕೂಡ ಹೇಳಲಾಗಿದೆ. ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿದ್ದಾರೆ. ಹಾಗಾಗಿ ಒಂದಷ್ಟು ಅನುಮಾನಗಳು ಮೂಡಿವೆ. ಅಲ್ಲದೇ, ಬಿಗ್​ ಬಾಸ್​ ಮನೆಗೂ ಬಂದಿರುವ ಪೊಲೀಸರು ಡ್ರೋನ್​ ಪ್ರತಾಪ್​ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ‘ಬಿಗ್​ ಬಾಸ್​’ (BBK 10) ಫಿನಾಲೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಂದರ್ಭದಲ್ಲಿ ಡ್ರೋನ್​ ಪ್ರತಾಪ್ ಕುರಿತು ಶಾಕಿಂಗ್​ ಸುದ್ದಿಗಳು ಹೊರಬಂದಿರುತ್ತಿವೆ. ಆಸ್ಪತ್ರೆಯಲ್ಲಿ ಅವರಿಗೆ ಹಲವು ಬಗೆಯ ಪರೀಕ್ಷೆಗಳನ್ನು ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More