ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಳಿಗೆಗಳ ಮೇಲೆ ದಾಳಿ; ರೂ. 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಸಿಂಧನೂರು ತಾಲ್ಲೂಕಿನ ಗುಂಜಳ್ಳಿ ಎಂಬಲ್ಲಿ ತುರ್ವಿಹಾಳ್ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ದಾಸ್ತಾನು ವಶಪಡಿಸಿಕೊಂಡಿದ್ದಾರೆ. ಟಿವಿ9 ಕನ್ನಡ ವಾಹಿನಿಯ ರಾಯಚೂರು ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಬೇರೆ ಕೆಲ ಭಾಗಗಳಲ್ಲೂ ದಾಳಿ ನಡೆಸಿರುವ ಪೊಲೀಸರು ಒಟ್ಟು 24 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಳಿಗೆಗಳ ಮೇಲೆ ದಾಳಿ; ರೂ. 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ
|

Updated on: Oct 14, 2023 | 10:44 AM

ರಾಯಚೂರು: ಕೇವಲ ಒಂದು ವಾರದ ಹಿಂದೆ ಬೆಂಗಳೂರು ನಗರ ಹೊರವಲಯದ ಅತ್ತಿಬೆಲೆಯಲ್ಲಿ ಪಟಾಕಿ ದುರಂತ (Attibele Firecracker Tragedy) ಸಂಭವಿಸಿ 16 ಜನ ದಾರುಣ ಸಾವನ್ನಪ್ಪಿದರೂ ರಾಜ್ಯದಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿಕೊಟ್ಟುಕೊಳ್ಳುವುದನ್ನು ಕೆಲ ವಿವೇಕಹೀನರು ಮುಂದುವರಿಸಿದ್ದಾರೆ. ರಾಯಾಚೂರು ಜಿಲ್ಲೆಯ ಪೊಲೀಸರು (Raichur district police) ಹಲವು ಕಡೆ ದಾಳಿ ನಡೆಸಿ ಪರವಾನಗಿ ಇಲ್ಲದೆ ಸಂಗ್ರಹಿಸಿದ್ದ ಪಟಾಕಿ ದಾಸ್ತಾನನ್ನು (firecracker stock) ವಶಕ್ಕೆ ಪಡೆದಿದ್ದಾರೆ ಮತ್ತು ಕೆಲವರನ್ನು ಬಂಧಿಸಿದ್ದಾರೆ. ನಗರದ ಬೆಸ್ತವಾರಪೇಟ್ ಪ್ರದೇಶದಲ್ಲಿ ರಮೇಶ್ ಎನ್ನುವವನ ಮನೆ ಮೇಲೆ ಸದರ್ ಬಜಾರ್ ಠಾಣೆಯ ಪೊಲೀಸರು ದಾಳಿ ನಡೆಸಿ ಸುಮಾರು ರೂ. 50,000 ಮೌಲ್ಯದ ಪಟಾಕಿ ದಾಸ್ತಾನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ, ಸಿಂಧನೂರು ತಾಲ್ಲೂಕಿನ ಗುಂಜಳ್ಳಿ ಎಂಬಲ್ಲಿ ತುರ್ವಿಹಾಳ್ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ದಾಸ್ತಾನು ವಶಪಡಿಸಿಕೊಂಡಿದ್ದಾರೆ. ಟಿವಿ9 ಕನ್ನಡ ವಾಹಿನಿಯ ರಾಯಚೂರು ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಬೇರೆ ಕೆಲ ಭಾಗಗಳಲ್ಲೂ ದಾಳಿ ನಡೆಸಿರುವ ಪೊಲೀಸರು ಒಟ್ಟು 24 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us