ಚಪ್ಪಲಿ-ಕಲ್ಲು ತೂರಾಟ: ಪಂಚಮಸಾಲಿ ಹೋರಾಟದಿಂದ ಬೆಳಗಾವಿ ಕೊತ-ಕೊತ!
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.
ಬೆಳಗಾವಿ, (ಡಿಸೆಂಬರ್ 10): ಬೆಳಗಾವಿಯ ಸುವರ್ಣಸೌಧದ ಮುಂಭಾಗ ನಡೆಯುತ್ತಿದ್ದ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 2ಎ ಮೀಸಲಾತಿ ನೀಡಲೇಬೇಕೆಂದು ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರಿಂದ ಪೊಲೀಸರು ಹಾಗೂ ಪ್ರತಿಭಟನೆಕಾರರ ನಡುವೆ ವಾಗ್ದಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ ಬಳಿಕ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಬಳಿಕ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
Published on: Dec 10, 2024 04:26 PM
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

