ಚಪ್ಪಲಿ-ಕಲ್ಲು ತೂರಾಟ: ಪಂಚಮಸಾಲಿ ಹೋರಾಟದಿಂದ ಬೆಳಗಾವಿ ಕೊತ-ಕೊತ!

Updated on: Dec 10, 2024 | 4:28 PM

ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.

ಬೆಳಗಾವಿ, (ಡಿಸೆಂಬರ್ 10): ಬೆಳಗಾವಿಯ ಸುವರ್ಣಸೌಧದ ಮುಂಭಾಗ ನಡೆಯುತ್ತಿದ್ದ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 2ಎ ಮೀಸಲಾತಿ ನೀಡಲೇಬೇಕೆಂದು ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರಿಂದ ಪೊಲೀಸರು ಹಾಗೂ ಪ್ರತಿಭಟನೆಕಾರರ ನಡುವೆ ವಾಗ್ದಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ ಬಳಿಕ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಬಳಿಕ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

Published on: Dec 10, 2024 04:26 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More