ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ; ವಿದ್ಯಾರ್ಥಿಗಳ ಮೇಲೆ ಪೊಲೀಸರ ಲಾಠಿ ಚಾರ್ಜ್

ಸುಷ್ಮಾ ಚಕ್ರೆ
|

Updated on:Dec 25, 2024 | 8:44 PM

BPSC ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಇಂದು ನಡೆಯುತ್ತಿರುವ ಪ್ರತಿಭಟನೆಯ ನಡುವೆ ಮಾಜಿ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸೂರಾಜ್ ಪಕ್ಷವು ಬಿಹಾರ ಲೋಕಸೇವಾ ಆಯೋಗವು ಇತ್ತೀಚೆಗೆ ನಡೆಸಿದ ಪರೀಕ್ಷೆಯನ್ನು ರದ್ದುಗೊಳಿಸುವ ಬೇಡಿಕೆಯನ್ನು ಬೆಂಬಲಿಸಿದೆ. ಇಂದು ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಬಿಪಿಎಸ್‌ಸಿ ಕಚೇರಿಯತ್ತ ಮೆರವಣಿಗೆ ನಡೆಸಿದರು. ಇದು ಪೊಲೀಸರೊಂದಿಗೆ ಘರ್ಷಣೆಗೆ ಕಾರಣವಾಯಿತು.

ನವದೆಹಲಿ: ಇಂದು ಬಿಪಿಎಸ್​ಸಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಆಯೋಗದ ಕಚೇರಿಗೆ ಘೇರಾವ್ ಹಾಕಲು ಜಮಾಯಿಸಿದ ಬಿಹಾರ ಲೋಕಸೇವಾ ಆಯೋಗದ (ಬಿಪಿಎಸ್‌ಸಿ) ಆಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪರೀಕ್ಷಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆಕಾಂಕ್ಷಿಗಳು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಬಿಪಿಎಸ್‌ಸಿ ಕಚೇರಿಯತ್ತ ಮೆರವಣಿಗೆ ನಡೆಸಿದರು. ಇದು ಪೊಲೀಸರೊಂದಿಗೆ ಘರ್ಷಣೆಗೆ ಕಾರಣವಾಯಿತು. ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುಂಪು ಚದುರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ವೇಳೆ ಲಾಠಿಚಾರ್ಜ್ ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 25, 2024 08:13 PM