ಮೈಸೂರು; ಠಾಣೆ ಮೇಲೆ ಕಲ್ಲುತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರ ಟ್ರಾನ್ಸ್ಫರ್ ಆಗಿದೆ: ಪ್ರಮೋದ್ ಮುತಾಲಿಕ್
ಕಾನೂನುಬಾಹಿರ ಚಟುವಟಿಕೆಗಳನ್ನು ನಿಲ್ಲಿಸಿದ್ದ ದಕ್ಷ ಅಧಿಕಾರಿಗಳನ್ನು ಟ್ರಾನ್ಸ್ಫರ್ ಮಾಡಿ ಅವರ ಸ್ಥಾನದಲ್ಲಿ ಒಬ್ಬ ಮುಸ್ಲಿಂ ಅಧಿಕಾರಿಯನ್ನು ತರಲಾಗಿದೆ, ಅವರು ಮುಸ್ಲಿಮರನ್ನು ರಕ್ಷಿಸುತ್ತಾರೆ ಮತ್ತು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಾರೆ. ಈ ನೀತಿಯು ಸರ್ಕಾರಕ್ಕೆ ಮುಳುವಾಗಲಿದೆ, ಸರ್ಕಾರದ ಪ್ರತಿನಿಧಿಗಳ ಮನೆಹೊಕ್ಕು ಅವರನ್ನು ಹೊಡೆಯುವ ಸಂದರ್ಭ ಸೃಷ್ಟಿಯಾದರೆ ಆಶ್ಚರ್ಯಪಡಬೇಕಿಲ್ಲ ಎಂದು ಮುತಾಲಿಕ್ ಹೇಳಿದರು.
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸರ್ಕಾರದ ವಿರುದ್ಧ ಕಿಡಿ ಕಾರಿ ಇದು ತುಷ್ಟೀಕರಣ ರಾಜಕಾರಣದ ಪರಮಾವಧಿ ಎಂದರು. ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಗುರುತಿಸಿದ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಟ್ರಾನ್ಫರ್ ಮಡುತ್ತದೆ, ಅವರನ್ನು ವರ್ಗಾವಣೆ ಮಾಡಿರುವುದಕ್ಕೆ ಸರ್ಕಾರದ ಬಳಿ ಉತ್ತರವಿದೆಯಾ? ಎಂದು ಮುತಾಲಿಕ್ ಪ್ರಶ್ನಿಸಿದರು. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಮೈಸೂರುವರೆಗೆ ಬಂದು ಇಲ್ಲಿಯವರೆಗೆ ಮಾಡಿರುವ ಬಂಧನಗಳು ಸಾಕು, ಮತ್ಯಾರನ್ನೂ ಬಂಧಿಸಬೇಡಿ ಅಂತ ಹೇಳಿ ಹೋಗಿದ್ದಾರೆ ಎಂದು ಮುತಾಲಿಕ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
