ಮೈಸೂರು; ಠಾಣೆ ಮೇಲೆ ಕಲ್ಲುತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರ ಟ್ರಾನ್ಸ್​​ಫರ್ ಆಗಿದೆ: ಪ್ರಮೋದ್ ಮುತಾಲಿಕ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 22, 2025 | 5:32 PM

ಕಾನೂನುಬಾಹಿರ ಚಟುವಟಿಕೆಗಳನ್ನು ನಿಲ್ಲಿಸಿದ್ದ ದಕ್ಷ ಅಧಿಕಾರಿಗಳನ್ನು ಟ್ರಾನ್ಸ್​ಫರ್ ಮಾಡಿ ಅವರ ಸ್ಥಾನದಲ್ಲಿ ಒಬ್ಬ ಮುಸ್ಲಿಂ ಅಧಿಕಾರಿಯನ್ನು ತರಲಾಗಿದೆ, ಅವರು ಮುಸ್ಲಿಮರನ್ನು ರಕ್ಷಿಸುತ್ತಾರೆ ಮತ್ತು ಹಿಂದೂಗಳ ಮೇಲೆ ದೌರ್ಜನ್ಯವೆಸಗುತ್ತಾರೆ. ಈ ನೀತಿಯು ಸರ್ಕಾರಕ್ಕೆ ಮುಳುವಾಗಲಿದೆ, ಸರ್ಕಾರದ ಪ್ರತಿನಿಧಿಗಳ ಮನೆಹೊಕ್ಕು ಅವರನ್ನು ಹೊಡೆಯುವ ಸಂದರ್ಭ ಸೃಷ್ಟಿಯಾದರೆ ಆಶ್ಚರ್ಯಪಡಬೇಕಿಲ್ಲ ಎಂದು ಮುತಾಲಿಕ್ ಹೇಳಿದರು.

ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮತ್ತು ಪೊಲೀಸರ ಮೇಲೆ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸರ್ಕಾರದ ವಿರುದ್ಧ ಕಿಡಿ ಕಾರಿ ಇದು ತುಷ್ಟೀಕರಣ ರಾಜಕಾರಣದ ಪರಮಾವಧಿ ಎಂದರು. ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಗುರುತಿಸಿದ ಪೊಲೀಸ್ ಅಧಿಕಾರಿಗಳನ್ನು ಸರ್ಕಾರ ಟ್ರಾನ್ಫರ್ ಮಡುತ್ತದೆ, ಅವರನ್ನು ವರ್ಗಾವಣೆ ಮಾಡಿರುವುದಕ್ಕೆ ಸರ್ಕಾರದ ಬಳಿ ಉತ್ತರವಿದೆಯಾ? ಎಂದು ಮುತಾಲಿಕ್ ಪ್ರಶ್ನಿಸಿದರು. ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಮೈಸೂರುವರೆಗೆ ಬಂದು ಇಲ್ಲಿಯವರೆಗೆ ಮಾಡಿರುವ ಬಂಧನಗಳು ಸಾಕು, ಮತ್ಯಾರನ್ನೂ ಬಂಧಿಸಬೇಡಿ ಅಂತ ಹೇಳಿ ಹೋಗಿದ್ದಾರೆ ಎಂದು ಮುತಾಲಿಕ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.