Eid-Ul-Fitr 2023: ಮುಸ್ಲಿಂ ಸಮುದಾಯಕ್ಕೆ ಸಂಭ್ರಮದ ರಂಜಾನ್, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್, ಬಿಗಿ ಪೊಲೀಸ್ ಬಂದೋಬಸ್ತ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 22, 2023 | 10:08 AM

ನಮಾಜ್ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತಿರಲು ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ರಾಜ್ಯದಾದ್ಯಂತ ಮುಸ್ಲಿಂ ಸಮುದಾಯ (Muslim community) ಬಹು ವಿಜೃಂಭಣೆಯಿಂದ ಇಂದು ರಂಜಾನ್ ಹಬ್ಬ (Ramzan festival) ಆಚರಿಸುತ್ತಿದೆ. ಹಬ್ಬದ ಪ್ರಯುಕ್ತ ನಗರದ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ (Eidgah Maidan) ಸಹಸ್ರಾರು ಸಂಖ್ಯೆಯಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ. ನಮಾಜ್ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತಿರಲು ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಾಮೂಹಿಕ ನಮಾಜ್ ಬೆಳಗ್ಗೆ 9.30 ರಿಂದ 10.30 ರವರೆಗೆ ಒಂದು ಗಂಟೆ ಕಾಲ ನಡೆಯಲಿದೆ. ನಗರ ಪೊಲೀಸ್ ಮೂಲಗಳ ಪ್ರಕಾರ 300 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್ ಗಾಗಿ ನಿಯೋಜಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.