ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಕೊಳ್ಳೇಗಾಲ ಪೊಲೀಸರು

Edited By:

Updated on: Nov 27, 2026 | 12:15 PM

ಪೋಷಕರ ವಿರೋಧದ ನಡುವೆ ಮದುವೆಯಾಗಿದ್ದ ಪ್ರಸಾದ್ ಮತ್ತು ರಕ್ಷಿತಾ ಜೋಡಿಗೆ ಕೊಳ್ಳೇಗಾಲ ಪೊಲೀಸರು ರಕ್ಷಣೆ ನೀಡಿದ್ದಾರೆ. 9 ವರ್ಷಗಳಿಂದ ಪ್ರೀತಿಸುತ್ತಿದ್ದ ಇವರು, ಪೋಷಕರ ಕೊಲೆ ಬೆದರಿಕೆ ನಡುವೆ ಹಿಲ್ದಾರಿ ಗಣೇಶ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ನಂತರ ಪೊಲೀಸ್ ಠಾಣೆಗೆ ಬಂದಿದ್ದ ನವದಂಪತಿಗೆ ಪೊಲೀಸರು ರಾಜಿ ಸಂಧಾನ ನಡೆಸಿ ಸುರಕ್ಷಿತವಾಗಿ ಕಳುಹಿಸಿಕೊಟ್ಟರು.

ಚಾಮರಾಜನಗರ, ನವೆಂಬರ್ 27: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ಪೋಷಕರ ವಿರೋಧದ ನಡುವೆ ಮದುವೆಯಾದ ಪ್ರೇಮ ಜೋಡಿಗೆ ಖಾಕಿ ರಕ್ಷಣೆ ನೀಡಿ ಮಾನವೀಯತೆ ಮೆರೆದಿದೆ. ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದ ಪ್ರಸಾದ್ ಹಾಗೂ ಮೈಸೂರಿನ ಹುಣಸೂರು ಮೂಲದ ರಕ್ಷಿತಾ ಕಳೆದ 9 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಚಾರ ಪೋಷಕರಿಗೆ ತಿಳಿದುಬಂದಾಗ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪೋಷಕರ ವಿರೋಧವನ್ನು ಲೆಕ್ಕಿಸದೆ ಈ ಜೋಡಿ ನಿನ್ನೆ ಹಿಲ್ದಾರಿ ಗಣೇಶ ದೇವಾಲಯದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಮದುವೆಯಾದರೆ ಕೊಲೆ ಮಾಡುವುದಾಗಿ ಪೋಷಕರು ಬೆದರಿಕೆ ಹಾಕಿದ್ದ ಕಾರಣ, ವಿವಾಹದ ನಂತರ ನವದಂಪತಿ ರಕ್ಷಣೆ ಕೋರಿ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ಆಗಮಿಸಿದ್ದರು.

ಪ್ರಕರಣದ ಮಾಹಿತಿ ಪಡೆದ ಪೊಲೀಸರು, ಪ್ರಸಾದ್ ಮತ್ತು ರಕ್ಷಿತಾ ಅವರ ಪೋಷಕರನ್ನು ಠಾಣೆಗೆ ಕರೆಸಿದರು. ಪ್ರೀತಿಸಿ ಮದುವೆಯಾಗಿರುವ ಮಕ್ಕಳ ಭವಿಷ್ಯದ ಬಗ್ಗೆ ತಿಳಿಹೇಳಿ, ರಾಜಿ ಸಂಧಾನಕ್ಕೆ ಮುಂದಾದರು. ಪೋಷಕರಿಗೆ ಬುದ್ದಿಮಾತು ಹೇಳಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ನೀಡಿದ ಪೊಲೀಸರು, ನವಜೋಡಿಗೆ ರಕ್ಷಣೆ ನೀಡಿ ಸುರಕ್ಷಿತವಾಗಿ ಕಳುಹಿಸಿಕೊಟ್ಟರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More