ನಡುರಾತ್ರಿ ಪೊಲೀಸ್​ ದಾಳಿ.. ಹಾಸನ ಜಿಲ್ಲಾ ಜೈಲಿನಲ್ಲಿ ಏನೆಲ್ಲಾ ಸಿಕ್ತು ಗೊತ್ತಾ?

ಸಾಧು ಶ್ರೀನಾಥ್​

Updated on: Aug 19, 2023 | 1:55 PM

Hassan district jail: ಹಾಸನ ಜಿಲ್ಲಾ ಕಾರಾಗೃಹದ ಮೇಲೆ ಶುಕ್ರವಾರ ಮಧ್ಯರಾತ್ರಿ ಎಎಸ್​ಪಿ ತಮ್ಮಯ್ಯ ನೇತೃತ್ವದಲ್ಲಿ 60 ಮಂದಿ ಸಿಬ್ಬಂದಿ ತಂಡದಿಂದ ದಾಳಿ ನಡೆದಿದೆ. ದಾಳಿ ವೇಳೆ ಪೊಲೀಸರು ಬರೋಬ್ಬರಿ 17 ಮೊಬೈಲ್ ಜಪ್ತಿ ಮಾಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಗಾಂಜಾ, ಬೀಡಿ, ಸಿಗರೇಟ್ ಸೇರಿ (mobile, ganja, cigarette, beedi) ಇನ್ನಿತರ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ. 

ಹಾಸನ ಜಿಲ್ಲಾ ಕಾರಾಗೃಹದ ಮೇಲೆ ಶುಕ್ರವಾರ ಮಧ್ಯರಾತ್ರಿ ಎಎಸ್​ಪಿ ತಮ್ಮಯ್ಯ ನೇತೃತ್ವದಲ್ಲಿ 60 ಮಂದಿ ಸಿಬ್ಬಂದಿ ತಂಡದಿಂದ ದಾಳಿ ನಡೆದಿದೆ. ದಾಳಿ ವೇಳೆ ಪೊಲೀಸರು ಬರೋಬ್ಬರಿ 17 ಮೊಬೈಲ್ ಜಪ್ತಿ ಮಾಡಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆದಿದೆ. ಗಾಂಜಾ, ಬೀಡಿ, ಸಿಗರೇಟ್ ಸೇರಿ (mobile, ganja, cigarette, beedi) ಇನ್ನಿತರ ಮಾದಕ ವಸ್ತು ವಶಕ್ಕೆ (confiscation) ಪಡೆದಿದ್ದಾರೆ. ಜೈಲಿನಿಂದಲೇ (Hassan jail) ಹೊರಗಿನವರ ಜೊತೆ ಕೈದಿಗಳು ಸಂಪರ್ಕದಲ್ಲಿದ್ದ ಹಿನ್ನೆಲೆ ಖಚಿತ ಮಾಹಿತಿಯೊಂದಿಗೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಆರೋಪಿಗಳ ಚಟುವಟಿಕೆ ಗಮನಿಸಿ ಖಚಿತ ಮಹಿತಿಯೊಂದಿಗೆ ದಿಢೀರ್ ದಾಳಿ ನಡೆಸಿದ್ದಾರೆ ಪೊಲೀಸರು. ಜೈಲಿನಲ್ಲಿದ್ದುಕೊಂಡೆ ಹೊರಗಿನವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪದಲ್ಲಿ ಈ ದಾಳಿ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು