ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ್ಚರಿಕೆ

Edited By:

Updated on: Jul 31, 2026 | 7:29 PM

ಮುಖ್ಯಾಂಶಗಳು

  • ಪೊಲೀಸ್ ನೇಮಕಾತಿ ಪರೀಕ್ಷೆ
  • ಅಭ್ಯರ್ಥಿಗಳಿಗೆ ಕೆಇಎ ನಿರ್ದೇಶಕರಿಂದ ಎಚ್ಚರಿಕೆ
  • ಪರೀಕ್ಷೆಯಲ್ಲಿ ಪಾರದರ್ಶಕತೆ, ಓಎಂಆರ್ ಶೀಟ್ ಲೈವ್

ಪೊಲೀಸ್ ನೇಮಕಾತಿ ಪರೀಕ್ಷೆಯ ಪಾರದರ್ಶಕತೆಗೆ ಕೆಇಎ ಬದ್ಧವಾಗಿದೆ ಎಂದು ನಿರ್ದೇಶಕ ಎಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿಗಳ ಓಎಂಆರ್ ಪ್ರತಿಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದಾಗಿ ತಿಳಿಸಿದ್ದಾರೆ. ಆಧಾರ್ ದುರ್ಬಳಕೆ, ಅನಗತ್ಯ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ವಿರುದ್ಧ ಎಚ್ಚರಿಕೆ ನೀಡಿದ್ದು, ಪರೀಕ್ಷಾ ಕೇಂದ್ರಕ್ಕೆ ಬೇಗ ತಲುಪಿ, ಸರಿಯಾದ ಡ್ರೆಸ್ ಕೋಡ್ ಪಾಲಿಸುವಂತೆ ಸಲಹೆ ನೀಡಿದ್ದಾರೆ.

ಬೆಂಗಳೂರು, ಜುಲೈ 31: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಅಭ್ಯರ್ಥಿಗಳು ಸಣ್ಣಪುಟ್ಟ ಎಡವಟ್ಟುಗಳನ್ನು ಮಾಡಿಕೊಳ್ಳದಂತೆ’ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಎಚ್ಚರಿಕೆ ನೀಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಅವರು, ‘ಈ ಬಾರಿ ಪರೀಕ್ಷೆ ಮುಗಿದ ತಕ್ಷಣವೇ ಕಲಬುರಗಿ, ರಾಯಚೂರು, ಧಾರವಾಡ, ದಾವಣಗೆರೆ ಹಾಗೂ ಮೈಸೂರು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ಮಧ್ಯರಾತ್ರಿಯೊಳಗಾಗಿ ವೆಬ್‌ಸೈಟ್‌ನಲ್ಲಿ ಲೈವ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್‌ನಲ್ಲಿ ತಂದೆಯ ಹಾಗೂ ತಮ್ಮ ಆಧಾರ್ ಸಂಖ್ಯೆಗಳನ್ನು ತಪ್ಪಾಗಿ ನಮೂದಿಸಿ, ಆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕೆಇಎ ಮೇಲೆ ಸುಳ್ಳು ಆರೋಪ ಮಾಡಬಾರದು, ಅಂತಹವರ ವಿರುದ್ಧ ಪೊಲೀಸ್ ಇಲಾಖೆಗೆ ದೂರು ನೀಡಲಾಗುವುದು’ ಎಂದರು. ‘ಅಭ್ಯರ್ಥಿಗಳು ಪರೀಕ್ಷೆಗೆ ಮುನ್ನ ಹಾಲ್ ಟಿಕೆಟ್‌ನಲ್ಲಿರುವ ವಿಳಾಸವನ್ನು ಸರಿಯಾಗಿ ಪರಿಶೀಲಿಸಿ, ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ’ ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 31, 2026 07:29 PM
Loading...
Unable to load recommendations.
Follow Us