ದರ್ಶನ್ ವಿಶ್ರಾಂತಿ ಪಡೆಯುತ್ತಿರುವ ಅಪಾರ್ಟ್​​ಮೆಂಟ್ ಕಾಂಪ್ಲೆಕ್ಸ್ ಬಳಿ ಬಿಗಿ ಪೊಲೀಸ್ ಭದ್ರತೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 31, 2024 | 11:21 AM

ದರ್ಶನ್ ಮತ್ತು ವಿಜಯಲಕ್ಷ್ಮಿಯವರ ಮಗ ವಿನೀಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಲಭ್ಯವಿರುವ ಮಾಹಿತಿ ಪ್ರಕಾರ ದರ್ಶನ್ ಕಳೆದ ರಾತ್ರಿಯೇ ಮಗನ ಜೊತೆ ಕೇಕ್ ಕಟ್ ಮಾಡಿ ವಿಶ್ ಮಾಡಿದ್ದಾರೆ. ವಿಪರೀತ ಬೆನ್ನುನೋವಿನಿಂದ ಬಳಲುತ್ತಿರುವ ಅವರು ಮಧ್ಯಾಹ್ನ ವೈದ್ಯರನ್ನು ಕಾಣಲಿದ್ದಾರೆ.

ಬೆಂಗಳೂರು: ನಿನ್ನೆ ರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲಿಂದ ಜಾಮೀನು ಮೇಲೆ ಹೊರಬಂದಿರುವ ನಟ ದರ್ಶನ್ ನಗರದ ಹೊಸಕೆರೆಹಳ್ಳಿಯಲ್ಲಿ ಅವರ ಪತ್ನಿ ವಿಜಯಲಕ್ಷ್ಮಿಗೆ ಸೇರಿದ ಫ್ಲ್ಯಾಟೊಂದರಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಅಭಿಮಾನಿಗಳು ಮನೆ ಬಳಿ ಜಮಾಯಿಸಿ ಗಲಾಟೆಯೆಬ್ಬಿಸಿದರೆ ನಟ ಮತ್ತು ಅಪಾರ್ಟ್​​ಮೆಂಟ್​ನಲ್ಲಿ ವಾಸ ಮಾಡುತ್ತಿರುವ ಜನಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಸಿಬ್ಬಂದಿ ಭದ್ರತೆಯನ್ನು ಒದಗಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ‘ನನ್ನಿಂದ ತಪ್ಪಾಗಿದ್ರೆ ಕ್ಷಮಿಸಿ’; ದರ್ಶನ್ ಕ್ಷಮೆ ಕೇಳಿದ್ದು ಯಾರ ಬಳಿ?

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.