Bengaluru News: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ!

|

Updated on: Jul 27, 2023 | 1:18 PM

ಉಡುಪಿ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣದ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿವೆ,

ಬೆಂಗಳೂರು: ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ (BJP Yuva Morcha) ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ (G Parameshwara) ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೇ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ (KSRP) ತುಕಡಿಯೊಂದನ್ನು ಅವರ ಮನೆ ಸುತ್ತ ನಿಯೋಜಿಸಲಾಗಿದೆ. ಮಂತ್ರಿಗಳ ನಿವಾಸಕ್ಕೆ ಹೋಗುವ ರಸ್ತೆಯಲ್ಲಿ ಬ್ಯಾರಿಕೇಡ್ ಗಳನ್ನು ಇಟ್ಟಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ