ಕಲಬುರಗಿ: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ, ಸಚಿವನ ಮನೆಗೆ ಬಿಗಿ ಪೊಲೀಸ್ ಭದ್ರತೆ
ಸಚಿನ್ ಬರೆದಿರುವ ಡೆತ್ ನೋಟ್ನಲ್ಲಿ ತನ್ನ ಹೆಸರಿಲ್ಲ, ತನ್ನ ವಿರುದ್ಧ ಯಾವುದೇ ಸಾಕ್ಷ್ಯಾಧಾರವಿಲ್ಲ ಹಾಗಾಗಿ ತಾನು ರಾಜೀನಾಮೆ ಸಲ್ಲಿಸುವ ಪ್ರಮೇಯವೇ ಉದ್ಭವಿಸಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳುತ್ತಿದ್ದಾರೆ. ಅವರು ಹೇಳಿದ್ದನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರಾವರ್ತಿಸುತ್ತಿದ್ದಾರೆ. ಅದರೆ ಖರ್ಗೆ ರಾಜೀನಾಮೆ ನೀಡದ ಹೊರತು ತಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ಹೇಳುತ್ತಿದೆ.
ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ್ ಸಾವಿನ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡರ ಪ್ರತಿಭಟನೆ ದಿನೇದಿನೆ ತೀವ್ರಗೊಳ್ಳುತ್ತಿದೆ. ಇವತ್ತು ಕಲಬುರಗಿಯಲ್ಲಿ ಬಿಜೆಪಿ ನಾಯಕರು ದೊಡ್ಡಮಟ್ಟದ ಪ್ರತಿಭಟನೆ ನಡೆಸುತ್ತಿದ್ದು ಐವಾನ್-ಇ-ಶಾಹಿ ಪ್ರದೇಶದಲ್ಲಿರುವ ಖರ್ಗೆ ಮನೆಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪ್ರತಿಭಟನೆಯಿಂದಾಗಿ ನಗರದ ಜಗತ್ ಸರ್ಕಲ್ ನಿಂದ ಎಸ್ವಿಪಿ ಸರ್ಕಲ್ ವರೆಗಿನ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಚಾರ ನಿಷೇಧ ಜಾರಿಯಲ್ಲಿರುತ್ತದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನನ್ನ ಹೆಸರೇ ಚಲವಾದಿ, ಪ್ರಿಯಾಂಕ್ ಖರ್ಗೆ ನನ್ನ ತಂಟೆಗೆ ಬಂದರೆ ಇನ್ನು ಸಮ್ಮನಿರಲ್ಲ: ಚಲವಾದಿ ನಾರಾಯಣಸ್ವಾಮಿ
Latest Videos