ಕೆರಗೋಡು ಹನುಮ ಧ್ಜಜ ವಿವಾದ: ಹಿಂದೂ ಪರ ಸಂಘಟನೆಗಳಿಂದ ಮಂಡ್ಯ ಬಂದ್, ಬಿಗಿ ಪೊಲೀಸ್ ಭದ್ರತೆ

ಕೆರಗೋಡು ಹನುಮ ಧ್ಜಜ ವಿವಾದ: ಹಿಂದೂ ಪರ ಸಂಘಟನೆಗಳಿಂದ ಮಂಡ್ಯ ಬಂದ್, ಬಿಗಿ ಪೊಲೀಸ್ ಭದ್ರತೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 09, 2024 | 10:56 AM

ಅಹಿತಕರ ಘಟನೆಗಳಿಗೆ ಆಸ್ಪದವಾಗದಿರಲು ನಗರದಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ (police security) ಮಾಡಲಾಗಿದೆ. ಪ್ರತಿಭಟನೆಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬಹುದಾದ ರೇಲ್ವೇ ನಿಲ್ದಾಣದ ಬಳಿಯಿರುವ ಆಂಜನೇಯ ಸ್ವಾಮಿ ದೇವಸ್ಥಾನ, ಮಹಾವೀರ ವೃತ್ತ, ಸಂಜಯ ಸರ್ಕಲ್ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮೊದಲಾದ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಿಲಾಗಿದೆ.

ಮಂಡ್ಯ: ಜಿಲ್ಲೆಯ ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ದ್ವಜ ತೆರವುಗೊಳಿಸಿದ (Hanuma Flag Row) ಹಿನ್ನೆಲೆಯಲ್ಲಿ ಉಂಟಾದ ವಿವಾದದ ಬಿಸಿ ಇನ್ನೂ ತಣ್ಣಗಾಗಿಲ್ಲ. ಹಿಂದೂ ಪರ ಸಂಘಟನೆಗಳು (pro Hindu oraganisations) ಇಂದು ಮಂಡ್ಯ ಬಂದ್ ಗೆ ಕರೆ ನೀಡಿವೆ ಮತ್ತು ಅದರ ಪರಿಣಾಮವಾಗಿ ನಗರದ ಬಹುತೇಕ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ. ಅಹಿತಕರ ಘಟನೆಗಳಿಗೆ ಆಸ್ಪದವಾಗದಿರಲು ನಗರದಾದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ (police security) ಮಾಡಲಾಗಿದೆ. ಪ್ರತಿಭಟನೆಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬಹುದಾದ ರೇಲ್ವೇ ನಿಲ್ದಾಣದ ಬಳಿಯಿರುವ ಆಂಜನೇಯ ಸ್ವಾಮಿ ದೇವಸ್ಥಾನ, ಮಹಾವೀರ ವೃತ್ತ, ಸಂಜಯ ಸರ್ಕಲ್ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮೊದಲಾದ ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಿಲಾಗಿದೆ. ಟಿವಿ9 ಮಂಡ್ಯ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ವಿವಿ ರೋಡ್, ಆರ್ ಪಿ ರೋಡ್, ಹೊಸಪೇಟೆ ಬೀದಿ ಮತ್ತು ಇನ್ನೂ ಕೆಲ ಕಡೆಗಳಲ್ಲಿ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಬಂದ್ ಇಟ್ಟಿದ್ದಾರೆ. ವಿವಾದದ ಸ್ಥಳವಾಗಿರುವ ಕೆರಗೋಡುನ್ಲಲು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಇಲ್ಲೂ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ