Karnataka Bandh: ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕುವ ಎಚ್ಚರಿಕೆ; ಮುಖ್ಯಮಂತ್ರಿ ನಿವಾಸದ ಸುತ್ತ ಹೆಚ್ಚುವರಿ ಪೊಲೀಸ್ ನಿಯೋಜನೆ

ಅರುಣ್​ ಕುಮಾರ್​ ಬೆಳ್ಳಿ

Updated on: Sep 29, 2023 | 12:23 PM

ಮುಖ್ಯಮಂತ್ರಿಗಳ ನಿವಾಸದ ಕಡೆ ಹೋಗುವ ಎಲ್ಲ ರಸ್ತೆಗಗನ್ನು ಬ್ಯಾರಿಕೇಡ್ ಗಳಿಂದ ಬಂದ್ ಮಾಡಿ ಪೊಲೀಸ್ ತುಕುಡಿಗಳನ್ನು ನಿಯೋಜಿಸಲಾಗಿದೆ. ಏತನ್ಮಧ್ಯೆ, ವಿವಾದಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ರಾಜ್ಯದ ನಿವೃತ್ತ ನ್ಯಾಯಾಧೀಶರೊಂದಿಗೆ ಸಿದ್ದರಾಮಯ್ಯ ಇಂದು ಸಾಯಂಕಾಲ ಸಭೆಯೊಂದನ್ನು ನಡೆಸಲಿದ್ದಾರೆ.

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಸಿದಂತೆ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಸರ್ಕಾರ (Karnataka government) ರಾಜ್ಯದ ಜನತೆಯ ಹಿತರಕ್ಷಣೆ ಕಾಪಾಡುವಲ್ಲಿ ವಿಫಲವಾಗಿದೆ ಅಂತ ಕನ್ನಡ ಪರ ಮತ್ತು ಇತರ ಅನೇಕ ಸಂಘಟನೆಗಳು ಇಂದು ಕರ್ನಾಟಕ ಬಂದ್ ಆಚರಿಸುತ್ತಿವೆ (Karnataka Bandh). ಪ್ರತಿಭಟನೆಯ ಭಾಗವಾಗಿ ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕೃಷ್ಣಾಗೆ ಮುತ್ತಿಗೆ ಹಾಕುವುದಾಗಿಯೂ ಪ್ರತಿಭಟನೆಕಾರು ಗುರುವಾರ ಹೇಳಿದ್ದರು. ಹಾಗಾಗೇ, ಸಿಎಂ ನಿವಾಸದ ಸುತ್ತ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಅಸಂಖ್ಯಾತ ಪೊಲೀಸರು ವಾಹನಗಳೊಂದಿಗೆ ಕಾವಲು ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮುಖ್ಯಮಂತ್ರಿಗಳ ನಿವಾಸದ ಕಡೆ ಹೋಗುವ ಎಲ್ಲ ರಸ್ತೆಗಗನ್ನು ಬ್ಯಾರಿಕೇಡ್ ಗಳಿಂದ ಬಂದ್ ಮಾಡಿ ಪೊಲೀಸ್ ತುಕುಡಿಗಳನ್ನು ನಿಯೋಜಿಸಲಾಗಿದೆ. ಏತನ್ಮಧ್ಯೆ, ವಿವಾದಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ರಾಜ್ಯದ ನಿವೃತ್ತ ನ್ಯಾಯಾಧೀಶರೊಂದಿಗೆ ಸಿದ್ದರಾಮಯ್ಯ ಇಂದು ಸಾಯಂಕಾಲ ಸಭೆಯೊಂದನ್ನು ನಡೆಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.