ವಿಷ್ಣುವರ್ಧನ್ ಸಮಾಧಿ ನೆಲಸಮ; ಅಭಿಮಾನ್ ಸ್ಟುಡಿಯೋದಲ್ಲಿ ಪೊಲೀಸ್ ಭದ್ರತೆ

Updated on: Aug 08, 2025 | 6:21 PM

ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡಲಾಗಿದೆ. ರಾತ್ರೋರಾತ್ರಿ ಸಮಾಧಿಯನ್ನು ತೆರವು ಮಾಡಲಾಗಿದೆ. ಈ ವಿಷಯ ತಿಳಿದ ಕೂಡಲೇ ಅನೇಕ ಅಭಿಮಾನಿಗಳು ಸ್ಥಳಕ್ಕೆ ಬಂದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಭದ್ರತೆ ನೀಡುತ್ತಿದ್ದಾರೆ.

‘ಸಾಹಸ ಸಿಂಹ’ ವಿಷ್ಣುವರ್ಧನ್ (Vishnuvardhan) ಅವರ ಸಮಾಧಿಯನ್ನು ನೆಲಸಮ ಮಾಡಲಾಗಿದೆ. ಕೆಂಗೇರಿಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ (Vishnuvardhan Samadhi) ಇತ್ತು. ರಾತ್ರೋರಾತ್ರಿ ಸಮಾಧಿಯನ್ನು ಕೆಡವಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಅನೇಕ ಅಭಿಮಾನಿಗಳು ಸ್ಥಳಕ್ಕೆ ಬಂದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೆಂಗೇರಿ ಠಾಣೆಯ ಪೊಲೀಸರು ಭದ್ರತೆ ನೀಡುತ್ತಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿ ತೆರವುಗೊಳಿಸಿದ್ದಕ್ಕೆ ಅಭಿಮಾನಿಗಳಿಗೆ ತೀವ್ರ ನೋವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.