ಲೆಫ್ಟಿನಂಟ್ ಕರ್ನಲ್ ಸೋಫಿಯಾ ಖುರೇಷಿ ಮಾವನ ಮನೆಗೆ ಕಿಡಿಗೇಡಿಗಳ ದಾಳಿ ವದಂತಿ ಹಿನ್ನೆಲೆ ಪೊಲೀಸ್ ಭದ್ರತೆ

ಅರುಣ್​ ಕುಮಾರ್​ ಬೆಳ್ಳಿ

Updated on: May 14, 2025 | 12:23 PM

ಕೊಣ್ಣೂರಲ್ಲಿ ಹಬ್ಬಿರುವ ವದಂತಿ ನಿಜವೇ ಆಗಿದ್ದಲ್ಲಿ ಇದು ದುರಂತವಲ್ಲದೆ ಮತ್ತೇನೂ ಅಲ್ಲ.  ಪಾಕಿಸ್ತಾನದ ಮೇಲೆ ದಾಳಿಯ ಸಂದರ್ಭದಲ್ಲಿ ಭಾರತೀಯ ಸೇನೆಯ ಮುಖವಾಗಿದ್ದ ಸೋಫಿಯಾ ಅವರ ಮಾವನ ಮನೆಯ ಮೇಲೆ ದಾಳಿ ನಡೆಸುವ ಹುನ್ನಾರವೇ? ಸೋಫಿಯಾರ ಅವರ ಪತಿ ಸಹ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿಯನ್ನು ಕನ್ನಡಿಗರಂತೂ ಕ್ಷಮಿಸಲಾರರು.

ಬೆಳಗಾವಿ, ಮೇ 14: ಮೊನ್ನೆಯಷ್ಟೇ ನಾವು ಪಾಕಿಸ್ತಾನ ಮೇಲೆ ಆಕ್ರಮಣ ನಡೆಸಿ ಅದನ್ನು ಬಗ್ಗುಬಡಿದ ಭಾರತೀಯ ಸೇನೆಯ ದಿನದ ಚಟುವಟಿಕೆಗಳನ್ನು ಮತ್ತು ಸೇನೆಯ ಯಶಸನ್ನು ಮಾಧ್ಯಮಗಳಿಗೆ ವಿವರಿಸುತ್ತಿದ್ದ ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿಯವರ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿರುವ ಮಾವನ ಮನೆಯನ್ನು ತೋರಿಸಿದ್ದೆವು ಮತ್ತು ನಮ್ಮ ವರದಿಗಾರ ಮನೆಯ ಸದಸ್ಯರೊಂದಿಗೆ ಮಾತಾಡಿದ್ದರು. ಈ ಮನೆಯ ಮೇಲೆ ಕೆಲ ಕಿಡಿಗೇಡಿಗಳು ದಾಳಿ ನಡೆಸುವ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.

ಇದನ್ನೂ ಓದಿ:  ಬೆಳಗಾವಿ: ಕರ್ನಲ್ ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.