AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲಿಗರನ್ನು ಜೊತೆಗೆ ಬಿಡದ್ದಕ್ಕೆ ಸಿಎಂ ನಿವಾಸದ ಬಳಿ ಪೊಲೀಸರ ಮೇಲೆಯೇ ಶಾಸಕ ಕೊತ್ತೂರು ಮಂಜುನಾಥ್ ಗರಂ

ಬೆಂಬಲಿಗರನ್ನು ಜೊತೆಗೆ ಬಿಡದ್ದಕ್ಕೆ ಸಿಎಂ ನಿವಾಸದ ಬಳಿ ಪೊಲೀಸರ ಮೇಲೆಯೇ ಶಾಸಕ ಕೊತ್ತೂರು ಮಂಜುನಾಥ್ ಗರಂ

ಈರಣ್ಣಾ ಬಸವಾ
| Edited By: |

Updated on: Oct 05, 2026 | 12:52 PM

Share

ಶಾಸಕ ಕೊತ್ತೂರು ಮಂಜುನಾಥ್ ಅವರು ಸಿಎಂ ಡಿ.ಕೆ. ಶಿವಕುಮಾರ್ ಭೇಟಿಗಾಗಿ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಮಂಜುನಾಥ್ ಅವರ ಬೆಂಬಲಿಗರನ್ನು ಒಳಗೆ ಬಿಡಲು ನಿರಾಕರಿಸಿದರು. ಇದರಿಂದ ಸಿಟ್ಟಿಗೆದ್ದ ಮಂಜುನಾಥ್, ತನ್ನೊಂದಿಗೆ ಬಂದ 100 ಜನರನ್ನೂ ಒಳಗೆ ಬಿಡಬೇಕು ಎಂದು ಪೊಲೀಸರಿಗೆ ತರಾಟೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ಬೆಂಗಳೂರು, ಅಕ್ಟೋಬರ್​​ 05: ಸಿಎಂ ಡಿ.ಕೆ. ಶಿವಕುಮಾರ್ ಭೇಟಿಗಾಗಿ ಶಾಸಕ ಕೊತ್ತೂರು ಮಂಜುನಾಥ್ ಅವರು ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರೊಂದಿಗೆ ಸಾಕಷ್ಟು ಸಂಖ್ಯೆಯ ಬೆಂಬಲಿಗರು ಕೂಡ ಇದ್ದರು. ಆದರೆ, ನಿವಾಸದ ಹೊರಗಿದ್ದ ಪೊಲೀಸರು ಕೊತ್ತೂರು ಮಂಜುನಾಥ್ ಅವರನ್ನು ಮಾತ್ರ ಒಳಗೆ ಬಿಡಲು ಸಿದ್ಧರಾದರು. ಆದರೆ ಅವರ ಜೊತೆ ಬಂದಿದ್ದ ಬೆಂಬಲಿಗರನ್ನು ಒಳಗೆ ಬಿಡಲು ನಿರಾಕರಿಸಿದರು. ಪೊಲೀಸರ ಈ ನಡೆಗೆ ಶಾಸಕ ಕೊತ್ತೂರು ಮಂಜುನಾಥ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಾನು ಬಂದರೂ ಬಿಡಬೇಕು, ನನ್ನ ಜೊತೆ ಹತ್ತು ಜನ ಬಂದರೂ ಬಿಡಬೇಕು, ನೂರು ಜನ ಬಂದರೂ ಕೂಡ ಒಳಗಡೆ ಬಿಡಬೇಕು ಎಂದು ಖಾರವಾಗಿ ಹೇಳಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಪೊಲೀಸರಿಗೆ ಗದರಿಲ್ಲ. ನನ್ ಜೊತೆ ಬಂದಿರೋರನ್ನ ಬಿಡಿ ಎಂದೆ. ನೂರು ಜನ ಎಂದು ಹೇಳಿಲ್ಲ. ಮೂರು ಜನ ಅಂದಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More