ತಾರಕಕ್ಕೇರಿದ ಮಾಜಿ ಸಿಎಂ ಜಗನ್-ಸಹೋದರಿ ನಡುವಿನ ಬೆಂಗಳೂರು ಆಸ್ತಿ ವಿವಾದ

Edited By:

Updated on: Nov 22, 2026 | 7:33 PM

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ಸಹೋದರಿ ಶರ್ಮಿಳಾ ರೆಡ್ಡಿ ನಡುವೆ ಆಸ್ತಿ ವಿವಾದ ತಾರಕಕ್ಕೇರಿದ್ದು, ಬಾಗಲೂರು ಮುಖ್ಯರಸ್ತೆಯ ಕಟ್ಟಿಗೆನಹಳ್ಳಿ ಬಳಿಯ ಜಗನ್ ಪ್ಯಾಲೇಸ್​​ನಲ್ಲಿ ಶರ್ಮಿಳ ಮಗಳ ಮದುವೆ ಮಾಡಲು ಜಗನ್ ಮೋಹನ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನ್ಯಾಯಾಲಯದಿಂದ ಶರ್ಮಿಳಾ ವಿರುದ್ದ ನಿರ್ಬಂಧಕಾಜ್ಞೆ ತಂದಿದ್ದಾರೆ

ಬೆಂಗಳೂರು, ನವೆಂಬರ್ 22: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ಸಹೋದರಿ, ಆಂಧ್ರ ಕಾಂಗ್ರೆಸ್ ಅಧ್ಯಕ್ಷ ಶರ್ಮಿಳಾ ರೆಡ್ಡಿ ನಡುವೆ ಆಸ್ತಿ ವಿವಾದ ತಾರಕಕ್ಕೇರಿದೆ. ಹೀಗಾಗಿ ಬಾಗಲೂರು ಮುಖ್ಯರಸ್ತೆಯ ಕಟ್ಟಿಗೆನಹಳ್ಳಿ ಬಳಿಯ ಜಗನ್ ಪ್ಯಾಲೇಸ್​​ನಲ್ಲಿ ಶರ್ಮಿಳ ಮಗಳ ಮದುವೆ ಮಾಡಲು ಜಗನ್ ಮೋಹನ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನ್ಯಾಯಾಲಯದಿಂದ ಶರ್ಮಿಳಾ ವಿರುದ್ದ ನಿರ್ಬಂಧಕಾಜ್ಞೆ ತಂದಿದ್ದಾರೆ. ಇನ್ನು ವಿವಾದಿತ ಫಾರ್ಮ್ ಹೌಸ್ ಪ್ರಕರಣ ಸಂಬಂಧ ಕೋರ್ಟ್​ ನಾಳೆ (ನವೆಂಬರ್ 23)  ತೀರ್ಪು ನೀಡಲಿದೆ. ಹೀಗಾಗಿ ಶರ್ಮಿಳಾ, ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಬಳಿಕ ವಿವಾದಿತ ಜಗನ್ ಪ್ಯಾಲೇಸ್ ಗೆ ತೆರಳಲು ಮುಂದಾಗಿದ್ದಾರೆ. ಆದ್ರೆ, ಪೊಲೀಸರು ತಡೆದಿದ್ದಾರೆ. ಜಗನ್ ಪ್ಯಾಲೇಸ್ ವಿವಾದ ಕೋರ್ಟಿನಲ್ಲಿರುವುದರಿಂದ ಅಲಿಗೆ ಹೋಗುವಂತಿಲ್ಲ ಎಂದು ಶರ್ಮಿಳಾರನ್ನು ಮಾರ್ಗಮಧ್ಯೆ ಯಲಹಂಕ ಪೊಲೀಸರು ತಡೆದಿದ್ದಾರೆ. ಹೀಗಾಗಿ ಶರ್ಮಿಳಾ ​,ಲಿಲಾ ಪ್ಯಾಲೆಸ್ ಹೋಟೆಲ್ ಗೆ ತೆರಳಿದ್ದು, ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More