ಮತ್ತೊಮ್ಮೆ ಕನ್ನಡಿಗರಿಗೆ ಅವಮಾನ, ಕೋರಮಂಗಲದ ಹೋಟೆಲೊಂದರ ವಿರುದ್ಧ ದೂರು ದಾಖಲು

Updated on: May 17, 2025 | 12:22 PM

ಬದುಕಲು ಕರ್ನಾಟಕಕ್ಕೆ ಬರುವ ಜನರಿಂದ ಕನ್ನಡಿಗರಿಗೆ ಅವಮಾನ ಆಗುತ್ತಿರುವ ಸಂಗತಿ ಹೊಸದೇನಲ್ಲ. ಇದು ಪದೇಪದೆ ಆಗುತ್ತಿದೆ. ಗಾಯಕ ಸೋನು ನಿಗಮ್ ವಿಷಯ ಕನ್ನಡಿಗರಿಗೆ ಗೊತ್ತಿದೆ. ಮತ್ತೊಂದು ಗಮನಾರ್ಹ ಸಂಗತಿಯೆಂದರೆ, ಕನ್ನಡೇತರರು ಈ ವಿಷಯವನ್ನು ವಿಕ್ಟಿಮ್ ಕಾರ್ಡ್ ಆಗಿ ಬಳಸಿ ಸಹಾನುಭೂತಿ ಗಿಟ್ಟಿಸಲು ಪ್ರಯತ್ನಿಸುತ್ತಿದ್ದಾರೆ.

ಬೆಂಗಳೂರು, ಮೇ 17: ಮಡಿವಾಳ ಪೊಲೀಸ್ ಠಾಣೆ ಲಿಮಿಟ್ಸ್ ನಲ್ಲಿ ಬರುವ ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ (GS Suites Hotel) ಮಾಲೀಕ ನಿಸ್ಸಂದೇಹವಾಗಿ ಕನ್ನಡಿಗನಲ್ಲ. ಒಂದು ವೇಳೆ ಅವನು ಕನ್ನಡಿಗನಾಗಿದ್ದರೆ ಹೀಗಾಗಲು ಬಿಡುತ್ತಿರಲಿಲ್ಲ. ಈ ಹೋಟೆಲ್​ನ ಎಲ್​ಈಡಿ ಡಿಸ್​ಪ್ಲೇ ಬೋರ್ಡ್ ನಲ್ಲಿ ಕನ್ನಡ ಮತ್ತು ಕನ್ನಡಿಗರಿಗೆ ಅವಮಾನವಾಗುವ ಪದಗಳನ್ನು ಬಳಸಲಾಗಿತ್ತು. ಅವಾಚ್ಯ ಪದಗಳ ಬಳಕೆಯಾಗಿರುವುದರಿಂದ ಅವುಗಳನ್ನು ಉಲ್ಲೇಖಿಸುವುದು ಸಾಧ್ಯವಿಲ್ಲ. ವಿಷಯ ಗೊತ್ತಾದ ಕೂಡಲೇ ಮಡಿವಾಳ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಬೋರ್ಡನ್ನು ಕಿತ್ತು ಹಾಕಿಸಿದ್ದಾರೆ.

ಇದನ್ನೂ ಓದಿ:  ಆರ್​ಸಿಬಿಗೆ ಇಲ್ಲ ಕನ್ನಡ ಹಾಡು, ಇದೆಂಥಹಾ ಅವಮಾನ ಎಂದ ಅಭಿಮಾನಿಗಳು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More