ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು ಮಧ್ಯೆ ಪೊಲೀಸರಿಂದಲೇ ನಿಯಮ ಉಲ್ಲಂಘನೆ

Edited By:

Updated on: Jul 11, 2026 | 3:32 PM

ಮುಖ್ಯಾಂಶಗಳು

  • ರಸ್ತೆ ಬದಿ ಅವೈಜ್ಞಾನಿಕ ಶಾಶ್ವತ ನಿಲುಗಡೆ ವಾಹನಗಳಿಗೆ ನೋಟಿಸ್​
  • ಜನಸಾಮಾನ್ಯರಿಗೊಂದು ಕಾನೂನು,‌ ಪೊಲೀಸರಿಗೊಂದು ಕಾನೂನು?
  • ಪೊಲೀಸ್ ಠಾಣೆಗಳ ಮುಂಭಾಗದ ಫುಟ್​ಪಾತ್ ಅತಿಕ್ರಮಣ

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗ ಹಾಗೂ ರಸ್ತೆಬದಿ ಅಕ್ರಮ ವಾಹನಗಳ ನಿಲುಗಡೆ ತೆರವಿಗೆ ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಆದರೆ, ಬ್ಯಾಟರಾಯನಪುರ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಮುಂದೆಯೇ ವರ್ಷಗಳಿಂದ ವಾಹನಗಳು ಅಕ್ರಮವಾಗಿ ನಿಂತಿವೆ. ಸಾರ್ವಜನಿಕರಿಗೆ ನೋಟಿಸ್ ನೀಡುವ ಪೊಲೀಸರೇ ನಿಯಮ ಉಲ್ಲಂಘಿಸುತ್ತಿರುವುದು ಪ್ರಶ್ನಾರ್ಹವಾಗಿದೆ.

ಬೆಂಗಳೂರು, ಜುಲೈ 11: ಬೆಂಗಳೂರಿನ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಶಾಶ್ವತವಾಗಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸಲು ಗ್ರೇಟರ್ ಬೆಂಗಳೂರು ಅಥಾರಿಟಿ ಅಧಿಕಾರಿಗಳು ಮತ್ತು ಬೆಂಗಳೂರು ಸಂಚಾರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಈ ನಡುವೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳ ಮುಂಭಾಗದಲ್ಲಿಯೇ ನಿಯಮಬಾಹಿರವಾಗಿ ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದಿದೆ. ಸಾರ್ವಜನಿಕರಿಗೆ ಅಕ್ರಮ ವಾಹನ ನಿಲುಗಡೆಗೆ ನೋಟಿಸ್ ನೀಡಿ, ತೆರವುಗೊಳಿಸಲು ಸೂಚಿಸುವ ಪೊಲೀಸರೇ ತಮ್ಮ ಠಾಣೆಗಳ ಮುಂದೆ ನಿಯಮ ಉಲ್ಲಂಘಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ರಮ ವಾಹನ ನಿಲುಗಡೆಗೆ ನೋಟಿಸ್, ಕ್ಲಾಂಪ್, ಟೋಯಿಂಗ್ ಮತ್ತು ನಂತರ ಹರಾಜು ಪ್ರಕ್ರಿಯೆಗಳ ಬಗ್ಗೆ ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More