ಕರಾವಳಿ ಭಾಗದಲ್ಲಿ ಶುಕ್ರವಾರ ಸಾಯಂಕಾಲ ವಿಶೇಷ ಪೊಲೀಸ್ ಕಾರ್ಯಾಚರಣೆ ನಡೆಯಲಿದೆ: ಅಲೋಕ್ ಕುಮಾರ್, ಎಡಿಜಿಪಿ
ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಬೆನ್ನಲ್ಲೇ ಫಾಜಿಲ್ (Fazil) ಹೆಸರಿನ ಯುವಕನೊಬ್ಬನ ಕೊಲೆ ನಡೆದಿರುವುದು ಬಹಳ ದುರದೃಷ್ಟಕರ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ (Alok Kumar) ಶುಕ್ರವಾರ ಮಂಗಳೂರಲ್ಲಿ ಟಿವಿ9 ವರದಿಗಾರನಿಗೆ ಹೇಳಿದರು. ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ (Udupi) ಜಿಲ್ಲೆಯಲ್ಲಿ ಪೊಲೀಸ್ ವಿಶೇಷ ಕಾರ್ಯಾಚರಣೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದರು.