ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ವರದಿ ಇನ್ನೂ ಪೊಲೀಸರ ಕೈ ಸೇರಿಲ್ಲ: ಸಿಬಿ ರಿಷ್ಯಂತ್, ದಾವಣಗೆರೆ ಎಸ್ ಪಿ
ಮರಣೋತ್ತರ ಪರೀಕ್ಷೆ ವರದಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಒಂದೆರಡು ದಿನಗಳಲ್ಲಿ ಅದು ಸಿಗುವ ನಿರೀಕ್ಷೆ ಇದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಶಾಸಕ ಎಮ್ ಪಿ ರೇಣುಕಾಚಾರ್ಯ (MP Renukacharya) ಅವರ ಸಹೋದರನ ಮಗ ಚಂದ್ರಶೇಖರ್ ಮರಣೋತ್ತರ ಪರೀಕ್ಷೆ ಮತ್ತು ಪೋರೆನ್ಸಿಕ್ ಲ್ಯಾಬ್ ವರದಿಗಳ ಬಗ್ಗೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ (CB Rishyanth) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ (autopsy report) ಇನ್ನೂ ಪೊಲೀಸರ ಕೈ ಸೇರಿಲ್ಲ. ಒಂದೆರಡು ದಿನಗಳಲ್ಲಿ ಅದು ಸಿಗುವ ನಿರೀಕ್ಷೆ ಇದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
Latest Videos