ರಾಜಕೀಯ ವೈಷಮ್ಯ: ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷ
ರಾಜಕೀಯ ವೈಷಮ್ಯ ಹಿನ್ನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಮಕ್ಕಳ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಂದಾಪುರ ಪೊಲೀಸ್ ಠಾಣೆಗೆ ಆನೆಗಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ದೂರು ನೀಡಿದ್ದರು. ದೂರಿನ ಹಿನ್ನಲೆ ಪೊಲೀಸರು ಮಕ್ಕಳ ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.
ಉಡುಪಿ, ನವೆಂಬರ್ 05: ರಾಜಕೀಯ ವೈಷಮ್ಯ ಹಿನ್ನೆಲೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಕ್ಕಳ ಯಕ್ಷಗಾನ ಅರ್ಧಕ್ಕೆ ನಿಲ್ಲಿಸಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ಮಕ್ಕಳ ಯಕ್ಷಗಾನ (Yakshagana) ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಂದಾಪುರ ಪೊಲೀಸ್ ಠಾಣೆಗೆ ಆನೆಗಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಉದಯ ಪೂಜಾರಿ ದೂರು ನೀಡಿದ್ದರು. ದೂರಿನ ಹಿನ್ನಲೆ ಪೊಲೀಸರು ಮಕ್ಕಳ ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ರಾತ್ರಿ 10:30 ರ ವರೆಗೆ ಯಕ್ಷಗಾನ ನಡೆಸಲು ಸಮಿತಿ ಅನುಮತಿ ಪಡೆದಿದ್ದು, ಆದರೆ ಸಮಯ ಮೀರುತ್ತಿದ್ದಂತೆ ಉದಯ ಪೂಜಾರಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಯಕ್ಷಗಾನದಲ್ಲಿ ಭಾಗವಹಿಸಬೇಕಿದ್ದ ಭಾಗವತರ ಅನಾರೋಗ್ಯದಿಂದ ವಿಳಂಬವಾಗಿದ್ದು, ಒಂದು ಗಂಟೆ ತಡವಾಗಿ ಕಾರ್ಯಕ್ರಮ ಪ್ರಾರಂಭವಾಗಿದೆ. ಅವಧಿ ಮುಗಿದ ಬಳಿಕ ಯಕ್ಷಗಾನ ನಡೆಸುತ್ತಿರುವ ಕುರಿತು ಉದಯ ಪೂಜಾರಿಯಿಂದ ದೂರು ನೀಡಿದ್ದು, ರಾಜಕೀಯ ಪ್ರೇರಿತವಾಗಿ ಯಕ್ಷಗಾನ ನಿಲ್ಲಿಸುವ ಯತ್ನ ನಡೆಯುತ್ತಿರುವ ಕುರಿತು ಆಯೋಜಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.