ಡಿಕೆ ಹೇಳಿಕೆ, ಸಿಎಂ ನಡೆ ನೋಡಿದ್ರೆ ಕಾಂತ್ರಿ ಆಗುತ್ತೆ, ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ ಜಿ.ಪರಮೇಶ್ವರ್ ರೇಸ್ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ಮುಖ್ಯಮಂತ್ರಿ ರೇಸ್ನಲ್ಲಿ ಇದ್ದಾರೆ. ಅತ್ತ ಎಂ.ಬಿ.ಪಾಟೀಲ್ ಸಹ ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ಮುಖ್ಯಮಂತ್ರಿ ಆಗೋಗಿದ್ದಾರೆ. ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದು ಹೇಳಿದರು.
ತುಮಕೂರು, (ಏಪ್ರಿಲ್ 24): ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಸಂಬಂಧ ಕರ್ನಾಟಕ ಕಾಂಗ್ರೆಸ್ನಲ್ಲಿ ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಮಾತನಾಡಿ, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ಆಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದ್ದು, ಡಿಕೆ ಹೇಳಿಕೆ, ಸಿಎಂ ನಡೆ ನೋಡಿದರೆ ಪಂಚರಾಜ್ಯ ಚುನಾವಣೆ ನಂತರ ರಾಜಕೀಯ ಬದಲಾವಣೆ ಆಗುತ್ತೆ. ಮುಖ್ಯಮಂತ್ರಿ ಆಗಬೇಕು ಅಂತ ಜಿ.ಪರಮೇಶ್ವರ್ ರೇಸ್ನಲ್ಲಿದ್ದಾರೆ. ಸತೀಶ್ ಜಾರಕಿಹೊಳಿ ಕೂಡ ಮುಖ್ಯಮಂತ್ರಿ ರೇಸ್ನಲ್ಲಿ ಇದ್ದಾರೆ. ಅತ್ತ ಎಂ.ಬಿ.ಪಾಟೀಲ್ ಸಹ ಮುಖ್ಯಮಂತ್ರಿ ಆಗಬೇಕು ಅಂತಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ಮುಖ್ಯಮಂತ್ರಿ ಆಗೋಗಿದ್ದಾರೆ. ಮೇ 10ಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ ಎಂದು ಹೇಳಿದರು.
